ಮಂಡ್ಯ [ಜು.09] :   ರಾಜ್ಯ ರಾಜಕೀಯದಲ್ಲಿ ರಾಜೀನಾಮೆ ಸಂಖ್ಯೆ ಬೆಳೆಯುತ್ತಲೇ ಇದೆ. ಶಾಸಕರು, ಸಚಿವರ ರಾಜೀನಾಮೆ ಬೆನ್ನಲ್ಲೇ ಸಿಎಂ ರಾಜೀನಾಮೆಗೆ ಕೂಡ ಆಗ್ರಹ ಕೇಳಿ ಬಂದಿದೆ. 

ರಾಜ್ಯದ ವಿವಿಧೆಡೆ ಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದ್ದು,  ಮಂಡ್ಯದಲ್ಲಿ ಬಿಜೆಪಿ ನಾಯಕರ ಪ್ರತಿಭಟನೆ ಕಾವು ಜೋರಾಗಿದೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಲ್ಲಿ ಬಿಜೆಪಿ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾರ್ಯಕರ್ತರ ಪ್ರತಿಭಟನೆ ನಡೆಯುತ್ತಿದೆ. 

ಕರ್ನಾಟಕ ರಾಜಕೀಯ ಪ್ರಹಸನ

ಬಹುಮತ ಕಳೆದುಕೊಂಡರೂ ಸರ್ಕಾರ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಸಿಎಂ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಈಗಾಗಲೇ ರಾಜೀನಾಮೆ ನೀಡಿದ ಶಾಸಕರ ಸಂಖ್ಯೆ ರೋಷನ್ ಬೇಗ್ ಸೇರಿ 14ಕ್ಕೆ ಏರಿದ್ದು, ಎಲ್ಲಾ ಸಚಿವರೂ ಕೂಡ ತಮ್ಮ ಸ್ಥಾನ ತೊರೆದಿದ್ದಾರೆ.