ಬೆಂಗಳೂರು(ಜು.24): ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್‌. ಯಡಿಯೂರಪ್ಪ ಅವರಿಗೆ ಶುಭಾಶಯ ತಿಳಿಸಿದ್ದಾರೆ. ನಿನ್ನೆ ಸದನದಲ್ಲಿ ನಡೆದ ವಿಶ್ವಾಸ ಮತ ಪ್ರಕ್ರಿಯೆಯಲ್ಲಿ ಬಿಜೆಪಿ ಬಹಮತ ಗಳಿಸಿದ್ದು, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗುವ ಸಮಯ ಸನ್ನಿಹಿತವಾಗಿದೆ. ಈ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್ ಅವರು ಫೇಸ್‌ಬುಕ್‌ನಲ್ಲಿ ಅಭಿನಂದನೆಗಳನ್ನು ತಿಳಿಸಿದ್ದಾರೆ.

'ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಅಭಿನಂದನೆಗಳು. ನನ್ನ ಗೆಲುವಿಗೆ ಬೆನ್ನಿಗೆ ನಿಂತ ನಾಯಕ ಇಂದು ಮುಖ್ಯಮಂತ್ರಿ ಕುರ್ಚಿ ಅಲಂಕರಿಸುತ್ತಿದ್ದಾರೆ ಎಂಬುದು ಖುಷಿ ವಿಚಾರ ಎಂದು ಫೇಸ್‌ಬುಕ್‌ನಲ್ಲಿ ಸುಮಲತಾ ಅವರು ಪೋಸ್ಟ್ ಮಾಡಿದ್ದಾರೆ.

ಬಿಎಸ್‌ವೈ ಸ್ವಕ್ಷೇತ್ರ ಶಿಕಾರಿಪುರದಲ್ಲಿ ಸಂಭ್ರಮ

ಹಲವು ದಿನಗಳಿಂದ ನಡೆಯುತ್ತಿದ್ದ ಪೊಲಿಟಿಕಲ್ ಹೈಡ್ರಾಮಕ್ಕೆ ನಿನ್ನೆ ತೆರೆ ಬಿದ್ದಿದ್ದು, ವಿಶ್ವಾಸ ಮತ ಪ್ರಕ್ರಿಯೆಯಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ 105 ವಿಶ್ವಾಸ ಮತ ಗಳಿಸಿ ಬಹುಮತ ಪಡೆದಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ