ನವದೆಹಲಿ[ಜು.23] : ಪಕ್ಷೇತರರಾಗಿ ಮಂಡ್ಯದಿಂದ ಗೆಲುವು ಸಾಧಿಸಿದ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ನಾಯಕ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು. 

ಸೋಮವಾರ ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಸುಮಲತಾ ಮಾತುಕತೆ ನಡೆಸಿದರು. 

ಹಿಂದೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷೇತರರಾಗಿ ಸ್ಪರ್ಧೆ ಮಾಡಿದ್ದು, ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರಿಂದಲೂ ಬೆಂಬಲ ದೊರಕಿತ್ತು. ಬಳಿಕ ಬಿಜೆಪಿ ಬೆಂಬಲಿಸಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು.