ಮಂಡ್ಯ (ಸೆ.19): ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆ ತಮಿಳುನಾಡಿಗೆ 10 ದಿನಗಳ ಕಾಲ ನಿತ್ಯ ಮೂರು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಿರುವುದನ್ನು ಖಂಡಿಸಿ ಕಾವೇರಿ ಕೊಳ್ಳದಲ್ಲಿ ಮತ್ತೆ ಆಕ್ರೋಶ ಭುಗಿಲೆದ್ದಿದೆ.

ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಸಾರ್ವಜನಿಕರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. 

ಶ್ರೀರಂಗಪಟ್ಟಣದಲ್ಲೂ ವಿವಿಧ ಸಂಘಟನೆಗಳ ಕಾರ್ಯಕರ್ತರು, ಮೈಸೂರು-ಬೆಂಗಳೂರು ಹೆದ್ದಾರಿ ತೆಡದು ಪ್ರತಿಭಟನೆ ನಡೆಸಿದ್ದಾರೆ.

ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದೆಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ನಾಳೆ ಮದ್ಯ ನಿಷೇಧ:

ಮಂಡ್ಯ ಜಿಲ್ಲಾದ್ಯಂತ ನಾಳೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ನಾಡಿದ್ದು ಬೆಳಗ್ಗೆ 6ರವರೆಗೆ ಮದ್ಯ ಮಾರಾಟ ಮಾಡಲು ನಿಷೇಧ ಹೇರಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಜಿಯಾವುಲ್ಲಾ ಹೇಳಿದ್ದಾ.