ತುಮಕೂರಿನಲ್ಲಿ ಪ್ರಾರಂಭ | ಎಚ್‌ಡಿಕೆ ಸರ್ಕಾರದ ಸಾಧನೆ ಜನರಿಗೆ ಮನವರಿಕೆ: ಗೌಡ
ತುಮಕೂರು: ಮುಂದಿನ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜೆಡಿಎಸ್ ಬೆಂಗಳೂರಿನಲ್ಲಿ ಕೆಲ ತಿಂಗಳ ಹಿಂದೆ ಚಾಲನೆ ನೀಡಿದ್ದ ‘ಮನೆ ಮನೆಗೆ ಕುಮಾರಣ್ಣ’ ಅಭಿಯಾನ ಈಗ ರಾಜ್ಯಾದ್ಯಂತ ವಿಸ್ತರಣೆಯಾಗಿದೆ.
ಪಕ್ಷದ ರಾಷ್ಟ್ರಾಧ್ಯಕ್ಷ ಎಚ್.ಡಿ. ದೇವೇಗೌಡ ಅವರು ತುಮಕೂರಿನಲ್ಲಿ ಈ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿದರು.
ಸಿದ್ಧಗಂಗಾ ಮಠದ ಆವರಣದಲ್ಲಿ ಜೆಡಿಎಸ್ ಘಟಕ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ದೇವೇಗೌಡ, ಕುಮಾರಸ್ವಾಮಿ ನೇತೃತ್ವದ 20 ತಿಂಗಳ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದ ಕಾರ್ಯಕ್ರಮಗಳು ಮತ್ತು ಮುಂದೆ ನೀಡಬಹುದಾದ ಕಾರ್ಯಕ್ರಮಗಳ ಕುರಿತು ಮತದಾರರಿಗೆ ಈ ಕಾರ್ಯಕ್ರಮದ ಮೂಲಕ ಮನವರಿಕೆ ಮಾಡಿಕೊಡಬೇಕು.
ಜತೆಗೆ, ಇನ್ನು ಆರು ತಿಂಗಳು ಮುಖಂಡರು, ಕಾರ್ಯಕರ್ತರು ಹಗಲಿರುಳೆನ್ನದೆ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್ ಈಗಾಗಲೇ ಪ್ರಚಾರ ಚುರುಕುಗೊಳಿಸಿದ್ದು, ಇದಕ್ಕೆ ಸಡ್ಡು ಹೊಡೆಯಲು ಜೆಡಿಎಸ್ ಈಗ ‘ಮನೆ ಮನೆಗೆ ಕುಮಾರಣ್ಣ ’ ಮೂಲಕ ಮತದಾರರ ತಲುಪಲು ಮುಂದಾಗಿದೆ
