ಮಂಗಳೂರು ಪಬ್ ದಾಳಿ; ಖುಲಾಸೆ ಪ್ರಶ್ನಿಸಿ ಮೇಲ್ಮನವಿ?

Mangaluru Pub Attack
Highlights

ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ  ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿರುವ  ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವ
ಕುರಿತು ಚರ್ಚಿಸಿ ನಿರ್ಧರಿಸಲಾಗುವುದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಬೆಂಗಳೂರು (ಮಾ. 14): ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ  ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿರುವ  ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವ
ಕುರಿತು ಚರ್ಚಿಸಿ ನಿರ್ಧರಿಸಲಾಗುವುದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಈಗಾಗಲೇ ಪ್ರಾಸಿಕ್ಯೂಷನ್ ಇಲಾಖೆ ನಿರ್ದೇಶಕರೊಂದಿಗೆ ಮಾತನಾಡಿದ್ದೇನೆ. ಪ್ರಕರಣಕ್ಕೆ ಸಂಬಂಧಿಸಿದಂತೆ  ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್,  ಸುಭಾಷ್ ಪಡೀಲ್, ಪ್ರಸಾದ್ ಅತ್ತಾವರ ಸೇರಿದಂತೆ 26  ಮಂದಿ ಆರೋಪಿಗಳನ್ನು ಸೂಕ್ತ ಸಾಕ್ಷ್ಯಾಧಾರಗಳ  ಕೊರತೆಯಿಂದ ಮಂಗಳೂರು ಜೆಎಂಎಫ್‌ಸಿ  ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ. ಪ್ರಕರಣದ ಸಂಬಂಧ ಪೊಲೀಸರು ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ  ಲೋಪವಿದೆಯೇ? ಅಥವಾ ವಿಡಿಯೋ ಸರ್ಟಿಫೈ
ಮಾಡಲಿಲ್ಲವೇ ಎಂಬುದೂ ಸೇರಿದಂತೆ ಹಲ್ಲೆಗೊಳಗಾದ ಹೆಣ್ಣು ಮಕ್ಕಳು ಯಾರೂ ಸಾಕ್ಷ್ಯ ಹೇಳಲು ಕೋರ್ಟ್‌ಗೆ ಬರಲಿಲ್ಲವೇಕೆ ಎಂಬ ಮಾಹಿತಿ ಸಂಗ್ರಹಿಸಿ ಮೇಲ್ಮನವಿ ಸಲ್ಲಿಸಬೇಕೋ ಬೇಡವೋ ಎಂಬುದನ್ನು  ತೀರ್ಮಾನಿಸಲಾಗುವುದು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಶಶಿಕಲಾ ನಟರಾಜನ್ ಅವರಿಗೆ ತಲೆದಿಂಬು, ಹೊದಿಕೆ ನೀಡಲು ಸೂಚನೆ ನೀಡಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ  ಪ್ರತಿಕ್ರಿಯಿಸಿದ ಗೃಹ ಸಚಿವರು, ಈ ಕುರಿತು ತನಿಖೆ ನಡೆಸಬೇಕೆಂದು ವಿನಯ್‌ಕುಮಾರ್ ಸಮಿತಿ ಶಿಫಾರಸು ಮಾಡಿದೆ. ತನಿಖೆಯನ್ನು ಎಸಿಬಿಗೆ ನೀಡಲಾಗಿದೆ. ತನಿಖೆ  ವರದಿ ಬಂದ ಬಳಿಕ ಸೂಕ್ತ ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದರು. ಬಿಜೆಪಿ ಪತ್ರಿಕಾಗೋಷ್ಠಿ ನಡೆಸಿ ಸುಳ್ಳು     ಆರೋಪ ಮಾಡುವುದು ಸಾಮಾನ್ಯ ಎಂದರು.

loader