ನೋಟು ನಿಷೇಧ ಪ್ರತಿಭಟನಾ ರ್ಯಾಲಿಯ ವೇಳೆ ಸೇನೆ ತಾಲೀಮು ನಡೆಸಿದ ಬಗ್ಗೆ ಮಮತಾ ಬ್ಯಾನರ್ಜಿ ಮಾಡಿರುವ ಆರೋಪಕ್ಕೆ ಮನೋಹರ್ ಪಾರಿಕ್ಕರ್ 'ನಿಮ್ಮಿಂದ ಇದನ್ನು ನಿರೀಕ್ಷಿಸಿರಲಿಲ್ಲ' ಎಂದು ದೀದಿಗೆ ಪತ್ರ ಬರೆದಿದ್ದಾರೆ.

ನವದೆಹಲಿ (ಡಿ.09): ನೋಟು ನಿಷೇಧ ಪ್ರತಿಭಟನಾ ರ್ಯಾಲಿಯ ವೇಳೆ ಸೇನಾ ನಿಯೋಜನೆ ಬಗ್ಗೆ ಮಮತಾ ಬ್ಯಾನರ್ಜಿ ಮಾಡಿರುವ ಆರೋಪಕ್ಕೆ ಮನೋಹರ್ ಪಾರಿಕ್ಕರ್ 'ನಿಮ್ಮಿಂದ ಇದನ್ನು ನಿರೀಕ್ಷಿಸಿರಲಿಲ್ಲ' ಎಂದು ದೀದಿಗೆ ಪತ್ರ ಬರೆದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನೋಟು ನಿಷೇಧ ವಿರುದ್ಧ ಪ್ರತಿಭಟನಾ ರ್ಯಾಲಿ ನಡೆಸುವ ವೇಳೆ ಟೋಲ್ ಪ್ಲಾಜಾದಲ್ಲಿ ಸೇನೆಯ ನಿಯೋಜನೆ ಕಂಡು ಮಮತಾ ಬ್ಯಾನರ್ಜಿ ಆಕ್ಷೇಪ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ರಕ್ಷಣಾ ಸಚಿವ ಮನೋಹರ್ ಪರ್ರಿಕರ್, ರಾಜಕೀಯ

ಪಕ್ಷಗಳು ಹಾಗೂ ರಾಜಕಾರಣಿಗಳು ಸಾರ್ವಜನಿಕ ಜೀವನದಲ್ಲಿ ಬೇರೆಯವರ ಬಗ್ಗೆ ಟೀಕೆ ಮಾಡುವುದು ಸಹಜ. ಆದರೆ ಸೇನೆಯ ಬಗ್ಗೆ ಮಾತನಾಡುವಾಗ ಎಚ್ಚರದಿಂದರಬೇಕು. ನಿಮ್ಮಿಂದ ಇಂತಹ ಮಾತನ್ನು ನಿರೀಕ್ಷಿಸಿರಲಿಲ್ಲ. ಇದು ನನಗೆ ಬಹಳ

ನೋವುಂಟು ಮಾಡಿದೆ ಎಂದು ಪತ್ರ ಬರೆದಿದ್ದಾರೆ.