ಮಾಜಿ ರಕ್ಷಣಾ ಸಚಿವ ಮನೋಹರ್ ಪರ್ರಿಕರ್ ಗೋವಾದ 13 ನೇ  ಮುಖ್ಯಮಂತ್ರಿಯಾಗಿ 8 ಶಾಸಕರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನವದೆಹಲಿ (ಮಾ.14): ಮಾಜಿ ರಕ್ಷಣಾ ಸಚಿವ ಮನೋಹರ್ ಪರ್ರಿಕರ್ ಗೋವಾದ 13ನೇ ಮುಖ್ಯಮಂತ್ರಿಯಾಗಿ 8 ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಜ್ಯಪಾಲೆ ಮೃದುಲಾ ಸಿಂಹ ರಾಜಭವನದಲ್ಲಿ ಪರ್ರಿಕರ್'ಗೆ ಪ್ರಮಾಣ ವಚನ ಬೋಧಿಸಿದರು. ಮಾತೃಭಾಷೆಯಾದ ಕೊಂಕಣಿಯಲ್ಲಿ ಪರ್ರಿಕರ್ ಪ್ರಮಾಣ ವಚನ ಸ್ವೀಕರಿಸಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಗೃಹ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.

ಮನೋಹರ್ ಪರ್ರಿಕರ್ ಐಐಟಿ-ಮುಂಬೈನಲ್ಲಿ ಎಂಜಿನೀಯರಿಂಗ್ ಪದವಿ ಪಡೆದಿದ್ದಾರೆ. 2012 ರಲ್ಲಿ ನಡೆದ ಗೋವಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಸಾರಥ್ಯ ವಹಿಸಿದ್ದರು. 2014 ರಲ್ಲಿ ಮೋದಿ ಸಂಪುಟದಲ್ಲಿ ರಕ್ಷಣಾ ಸಚಿವರಾಗಿ ಸೇರ್ಪಡೆಯಾದರು. 2000-2002, 20002- 2005 ರ ಅವಧಿಯಲ್ಲೂ ಪರ್ರಿಕರ್ ಗೋವಾ ಸಿಎಂ ಆಗಿ ಕಾರ್ಯ ನಿರ್ವಹಿಸಿದ್ದರು. ಇದೀಗ 3 ನೇ ಅವಧಿಗೆ ಮುಖ್ಯಮಂತ್ರಿಯಾಗಿದ್ದಾರೆ.