ಪಣಜಿ[ಆ.29]: ಅನಾರೋಗ್ಯದಿಂದ ಬಳಲುತ್ತಿರುವ ಗೋವಾ ಸಿಎಂ ಮನೋಹರ್ ಪರಿಕ್ಕರ್ ಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಮ್ಮೆ ಅಮೆರಿಕಕ್ಕೆ ತೆರಳಲಿದ್ದಾರೆ. ಪ್ಯಾಂಕ್ರಿಯಾಟಿಕ್ಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಪರಿಕ್ಕರ್, ಅಮೆರಿಕದಲ್ಲಿ ಮೂರು ತಿಂಗಳ ಚಿಕಿತ್ಸೆ ಪಡೆದು ಜೂನಿನಲ್ಲಿ ಸ್ವದೇಶಕ್ಕೆ ವಾಪಸ್'ಆಗಿದ್ದರು.

ಈಗ ಪರಿಕ್ಕರ್ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಯ ಕಂಡು ಬಂದಿದೆ. ಹೀಗಾಗಿ ಬುಧವಾರ ಮತ್ತೊಮ್ಮೆ ಅಮೆರಿಕಕ್ಕೆ ತೆರಳುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ, ಗಾಬರಿ ಪಡುವ ಅಗತ್ಯವಿಲ್ಲ ಎಂದು ಗೋವಾ ವಿಧಾನಸಭೆ ಸ್ಪೀಕರ್ ಪ್ರಮೋದ್ ಸಾವಂತ್ ತಿಳಿಸಿದ್ದಾರೆ. ಆದರೆ ಪರಿಕ್ಕರ್ ಅನುಪಸ್ಥಿತಿಯಲ್ಲಿ ಆಡಳಿತವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿಲ್ಲ.