ನಿತ್ಯ ಸಾವಿರಾರು ಭಕ್ತರು ಭೇಟಿ ನೀಡುವ ಧಾರ್ಮಿಕ ಕ್ಷೇತ್ರವಾದ ಚಾಮುಂಡಿಬೆಟ್ಟದ ಪರಿಸರದಲ್ಲಿ ಪೌರಕಾರ್ಮಿಕನೊಬ್ಬನನ್ನು ಬಲವಂತವಾಗಿ ಮ್ಯಾನ್‌ಹೋಲ್‌ಗೆ ಇಳಿಸಿದ ಆರೋಪ ಕೇಳಿಬಂದಿದೆ. ಚಾಮುಂಡಿಬೆಟ್ಟದ ಗ್ರಾಪಂ ಅಧ್ಯಕ್ಷೆ ಮತ್ತು ಗ್ರಾಪಂ ಅಭಿವೃದ್ಧಿ ಅಧಿಕಾರಿ ಅವರ ಸೂಚನೆಯ ಮೇರೆಗೆ ಮ್ಯಾನ್‌ಹೋಲ್‌ಗೆ ಪೌರಕಾರ್ಮಿಕರೊಬ್ಬರು ಇಳಿದು ಸ್ವಚ್ಛಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ಮೈಸೂರು: ಮ್ಯಾನ್‌ಹೋಲ್‌ಗೆ ಪೌರಕಾರ್ಮಿಕರನ್ನು ಇಳಿಸುವಂತಿಲ್ಲ ಎಂಬ ಸುಪ್ರೀಂ ಕೋರ್ಟ್‌ ಆದೇಶವನ್ನು ಮುರಿದ ಘಟನೆ ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಲ್ಲಿ ಬುಧವಾರ ನಡೆದಿದೆ.

ನಿತ್ಯ ಸಾವಿರಾರು ಭಕ್ತರು ಭೇಟಿ ನೀಡುವ ಧಾರ್ಮಿಕ ಕ್ಷೇತ್ರವಾದ ಚಾಮುಂಡಿಬೆಟ್ಟದ ಪರಿಸರದಲ್ಲಿ ಪೌರಕಾರ್ಮಿಕನೊಬ್ಬನನ್ನು ಬಲವಂತವಾಗಿ ಮ್ಯಾನ್‌ಹೋಲ್‌ಗೆ ಇಳಿಸಿದ ಆರೋಪ ಕೇಳಿಬಂದಿದೆ.

ಚಾಮುಂಡಿಬೆಟ್ಟದ ಗ್ರಾಪಂ ಅಧ್ಯಕ್ಷೆ ಮತ್ತು ಗ್ರಾಪಂ ಅಭಿವೃದ್ಧಿ ಅಧಿಕಾರಿ ಅವರ ಸೂಚನೆಯ ಮೇರೆಗೆ ಮ್ಯಾನ್‌ಹೋಲ್‌ಗೆ ಪೌರಕಾರ್ಮಿಕರೊಬ್ಬರು ಇಳಿದು ಸ್ವಚ್ಛಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ಅಧ್ಯಕ್ಷೆ ತಮ್ಮ ಮನೆ ಮುಂದೆ ಕಟ್ಟಿಕೊಂಡಿದ್ದ ಮ್ಯಾನ್‌ಹೋಲ… ಶುಚಿ ಮಾಡಲು ಪೌರಕಾರ್ಮಿಕನನ್ನು ಇಳಿಸಲು ಬಲವಂತ ಮಾಡಿದ್ದಲ್ಲದೆ ಇಳಿಯ ದಿದ್ದಲ್ಲಿ ಕೆಲಸದಿಂದ ವಜಾ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.