ಹೆಚ್ಚಿನ ಸಂಖ್ಯೆಯ ಮುಖಂಡರು ಹಾಗೂ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ. 

ಬೀದರ್: ಕಾಂಗ್ರೆಸ್ ಸೇರೋದಕ್ಕೆ ಹಲವಾರು ಮುಖಂಡರು ಬಯಸಿದ್ದು, ಅದರಲ್ಲೂ ಬಿಜೆಪಿಯ ಅನೇಕ ಶಾಸಕರೂ ತುದಿಗಾಲಿನಲ್ಲಿ ನಿಂತಿದ್ದಾರೆ. ಈ ಕುರಿತು ನಾವು ಯಾರನ್ನು ತೆಗೆದುಕೊಳ್ಳಬೇಕು ಎಂಬ ಕುರಿತು ವಿಚಾರ ಮಾಡುವಂತಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ. 

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಮೊದಲ ಬಾರಿಗೆ ತವರು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿವಿಧ ಕಾಂಗ್ರೆಸ್ ಮುಖಂಡರಿಂದ ಸನ್ಮಾನ ಸ್ವೀಕರಿಸಿ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೇರುವ ಧಾವಂತದಲ್ಲಿ ಕಾಂಗ್ರೆಸ್‌ನ ಅತೃಪ್ತ ಶಾಸಕರು ಇದ್ದಾರೆ ಎಂಬ ಸುದ್ದಿಯನ್ನು ತಳ್ಳಿಹಾಕಿದರು. ಕಾಂಗ್ರೆಸ್ ಬೇರು ಮಟ್ಟದಿಂದ ಬಲಿಷ್ಠವಾಗಿದೆ. ಯಾರೊಬ್ಬ ಶಾಸಕರೂ ಬಿಜೆಪಿ ಸೇರುವ ಸಾಧ್ಯತೆಗಳಿಲ್ಲ ಎಂದರು.