ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಅತೃಪ್ತ ಮುಖಂಡ ರಮೇಶರ್ ಜಾರಕಿಹೊಳಿ ಬಿಜೆಪಿ ಸೇರ್ಪಡೆ ವಿಚಾರ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. 

ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ರಾಜ್ಯದಲ್ಲಿ ಮೈತ್ರಿ ಸರ್ಕಾರ ಉರುಳಲಿದೆ ಎಂದು ಭವಿಷ್ಯ ನುಡಿಯುತ್ತಿದ್ದಾರೆ. ಇದಕ್ಕೆ ಮೈತ್ರಿ ಮುಖಂಡರೂ ಕೂಡ ತಿರುಗೇಟು ನೀಡುತ್ತಿದ್ದಾರೆ. 

ಇದೇ ವೇಳೆ ಕೈ ಅತೃಪ್ತ ನಾಯಕ  ರಮೇಶ್ ಅವರ ಜತೆಗೆ ಹಲವು ಶಾಸಕರು ಸಂಪರ್ಕದಲ್ಲಿದ್ದಾರೆ. ಅವರರಾಜೀನಾಮೆ ಬಳಿಕ ನಾವು ಯೋಚಿಸುತ್ತೇವೆ ಎಂದು ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.