Asianet Suvarna News Asianet Suvarna News

ತುಂಬುತ್ತಿವೆ ರಾಜ್ಯದ ಡ್ಯಾಂಗಳು ಎಚ್ಚರ

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಾರಂಗಿ ಮತ್ತು ಕಬಿನಿ ಜಲಾಶಯಗಳು ಸಂಪೂರ್ಣ ಭರ್ತಿಯಾಗುತ್ತಿದ್ದು, ಹೆಚ್ಚಿನ ಪ್ರಮಾಣದ ನೀರನ್ನು ನದಿಗಳಿಗೆ ಹರಿಸಲಾಗುತ್ತಿರುವುದರಿಂದ ನದಿಪಾತ್ರದ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಆಯಾ ಜಿಲ್ಲಾಡಳಿತಗಳಿಗೆ ಸರ್ಕಾರ ಸೂಚನೆ ನೀಡಿದೆ.

Many Dams Running Near Full After Heavy Rains In Karnataka
Author
Bengaluru, First Published Jul 12, 2018, 8:33 AM IST

ಬೆಂಗಳೂರು :  ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಾರಂಗಿ ಮತ್ತು ಕಬಿನಿ ಜಲಾಶಯಗಳು ಸಂಪೂರ್ಣ ಭರ್ತಿಯಾಗುತ್ತಿದ್ದು, ಹೆಚ್ಚಿನ ಪ್ರಮಾಣದ ನೀರನ್ನು ನದಿಗಳಿಗೆ ಹರಿಸಲಾಗುತ್ತಿರುವುದರಿಂದ ನದಿಪಾತ್ರದ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಆಯಾ ಜಿಲ್ಲಾಡಳಿತಗಳಿಗೆ ಸರ್ಕಾರ ಸೂಚನೆ ನೀಡಿದೆ.

ನದಿಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿರುವುದರಿಂದ ಆಯಾ ಜಿಲ್ಲಾಡಳಿತಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ನದಿ ಪಾತ್ರದಲ್ಲಿ ಮನರಂಜನಾ ಚಟುವಟಿಕೆಗಳನ್ನು ಮುಂಗಾರು ಅವಧಿ ಮುಗಿಯುವವರೆಗೆ ನಿಷಿದ್ಧಗೊಳಿಸಬೇಕು. ಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ನದಿಗೆ ಇಳಿಯಲು, ಈಜುವುದಕ್ಕೆ ಅವಕಾಶ ನೀಡಬಾರದು. ಇದನ್ನು ತಡೆಯಲು ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದು ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ ಗಂಗಾರಾಂ ಬಡೇರಿಯಾ ಜಿಲ್ಲಾಧಿಕಾರಿಗಳು, ತಹಶೀಲ್ದಾರರು ಹಾಗೂ ಸಹಾಯಕ ಆಯುಕ್ತರುಗಳಿಗೆ ಸೂಚನೆ ನೀಡಿದ್ದಾರೆ.

ಪಶ್ಚಿಮಘಟ್ಟಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಕಬಿನಿ ಜಲಾಶಯ ಭರ್ತಿಯಾಗಲು 1.78 ಅಡಿಯಷ್ಟೇ ಬಾಕಿ ಇದ್ದು, ಜಲಾಶಯದಿಂದ 39,667 ಕ್ಯೂಸೆಕ್‌ನಷ್ಟುನೀರನ್ನು ನದಿಗೆ ಹರಿಸಲಾಗುತ್ತಿದೆ. ಹಾರಂಗಿ ಜಲಾಶಯದ ಭರ್ತಿಗೆ 1.55 ಅಡಿಯಷ್ಟೇ ಬಾಕಿ ಇದ್ದು 12,388 ಕ್ಯೂಸೆಕ್‌ನಷ್ಟುನೀರನ್ನು ನದಿಗೆ ಹರಿಸಲಾಗುತ್ತಿದೆ. ಕೆಆರ್‌ಎಸ್‌ ಜಲಾಶಯದ ಒಳಹರಿವು 35,689 ಕ್ಯೂಸೆಕ್‌ಗೆ ಏರಿಕೆಯಾಗಿದೆ. ಹೇಮಾವತಿ ಜಲಾಶಯಕ್ಕೆ 20,535 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಹಾಗಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ.

ಆಲಮಟ್ಟಿಗೆ 68 ಸಾವಿರ ಕ್ಯೂಸೆಕ್‌ ಒಳಹರಿವು:  ಕಳೆದ ಮೂರು ದಿನಗಳಿಂದ ಕೃಷ್ಣ, ಭೀಮಾ ಮತ್ತು ತುಂಗಭದ್ರಾ ನದಿ ಜಲಾನಯನ ಪ್ರದೇಶಗಳಲ್ಲಿ ಭಾ ಮಳೆಯಾಗಿದೆ. ಇದರಿಂದ ಆಲಮಟ್ಟಿಜಲಾಯಶಯದ ಒಳಹರಿವು 68,500 ಸಾವಿರ ಕ್ಯೂಸೆಕ್‌ ದಾಟಿದೆ. ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಬಳ್ಳಾರಿ ಭಾಗಗಳಲ್ಲಿ ತುಂಗಭದ್ರಾ ನದಿ ನೀರಿನ ಪ್ರಮಾಣ ಹೆಚ್ಚಾಗಲಿದೆ. ಜಿಲ್ಲಾಡಳಿತಗಳು ನದಿ ಪಾತ್ರದ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು ಎಂದು ಪ್ರಕಟಣೆಯಲ್ಲಿ ಸೂಚನೆ ನೀಡಲಾಗಿದೆ.

Follow Us:
Download App:
  • android
  • ios