ಇದೀಗ ಮತ್ತೊಂದಿಷ್ಟು ಅತೃಪ್ತ ಕಾಂಗ್ರೆಸ್ ಮುಖಂಡರು ಬಿಜೆಪಿಯತ್ತ ಸಾಗುವ ಪ್ರಯತ್ನಗಳು  ತೆರೆಮರೆಯಲ್ಲಿ ಸಾಗುತ್ತಿವೆ ಎನ್ನಲಾಗುತ್ತಿದೆ. ಹಲವು ತಾಲೂಕು ಪಂಚಾಯ್ತಿ ಸದಸ್ಯರು ಸೇರಿದಂತೆ ಎರಡನೇ ಹಂತದ ಮುಖಂಡರು ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಬೆಂಗಳೂರು : ಈ ನಡುವೆ ಜೆಡಿಎಸ್‌ಗೆ ಬೆಂಬಲಿಸುವ ಪಕ್ಷದ ನಿಲುವನ್ನು ವಿರೋಧಿಸಿ ಕಾಂಗ್ರೆಸ್ಸಿನ ಇನ್ನಷ್ಟು ಸ್ಥಳೀಯ ಮುಖಂಡರು ಬಿಜೆಪಿಗೆ ವಲಸೆ ಹೋಗುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎನ್ನಲಾದಿದೆ. 

ಹಲವು ತಾಲೂಕು ಪಂಚಾಯ್ತಿ ಸದಸ್ಯರು ಸೇರಿದಂತೆ ಎರಡನೇ ಹಂತದ ಮುಖಂಡರು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ರುದ್ರೇಶ್ ಅವರೊಂದಿಗೆ ತೆರೆಮರೆಯಲ್ಲಿ ಮಾತುಕತೆ ನಡೆಸುತ್ತಿದ್ದಾರೆ. 

ಈ ಬಗ್ಗೆ ಎರಡು ಅಥವಾ ಮೂರು ದಿನಗಳಲ್ಲಿ ಸ್ಪಷ್ಟ ಚಿತ್ರಣ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ.