ಕೊಟ್ಟೂರಿನಲ್ಲಿ ಅದ್ದೂರಿಯಾಗಿ ನಡೆಯುತ್ತಿದ್ದ ಬಸವೇಶ್ವರ ರಥೋತ್ಸವದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು.

ಬಳ್ಳಾರಿ(ಫೆ.21): ಚಕ್ರದ ಅಚ್ಚು ಮುರಿದ ಕಾರಣ 60 ಅಡಿ ಉದ್ದದ ರಥ ಕುಸಿದು ಬಿದ್ದು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆ ಕೂಡ್ಲಗಿ ತಾಲೂಕಿನ ಕೊಟ್ಟೂರು ಗ್ರಾಮದಲ್ಲಿ ನಡೆದಿದೆ.ಕೊಟ್ಟೂರಿನಲ್ಲಿ ಅದ್ದೂರಿಯಾಗಿ ನಡೆಯುತ್ತಿದ್ದ ಗುರುಬಸವೇಶ್ವರ ರಥೋತ್ಸವದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು. ರಥದ ಕೆಳಗೆ ಹಲವಾರು ಮಂದಿ ಸಿಲುಕಿರುವ ಸಾಧ್ಯತೆಯಿದೆ. ಮೂಲ ನಕ್ಷತ್ರದ ದಿನದಂದು ಈ ಜಾತ್ರೆ ನಡೆಯುತ್ತದೆ. ಈ ರಥಕ್ಕೆ ತೇರು ಕಟ್ಟುವ ಕಟ್ಟುವ ಕೆಲಸ 15 ದಿನಗಳಿಂದ ಶುರುವಾಗುತ್ತದೆ. 6 ಲಕ್ಷಕ್ಕೂ ಹೆಚ್ಚು ಜನರುಈ ಜಾತ್ರೆಯಲ್ಲಿ ಸೇರುತ್ತಾರೆ.

ರಥದ ಕೆಳಗಡೆ ಸಿಲುಕಿರುವ ಭಕ್ತರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಗೊಂಡವರನ್ನು ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾ