ನೂರಾರು ಸಂಖ್ಯೆಯಲ್ಲಿ ಸೇರಿದ್ದ ವಿವಿಧ ಸಂಘಟನೆಗಳ ಕಾರ್ಯಕರ್ತರು 500, 2000 ಸಾವಿರದ ಹೊಸ ನೋಟುಗಳ ಪ್ರತಿಯನ್ನು ಪ್ರದರ್ಶಿಸುತ್ತಾ ನಗರದ ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿಗೆವರೆಗೆ ಮೆರವಣಿಗೆ ಹಮ್ಮಿಕೊಂಡಿದ್ದರು.

ಧಾರವಾಡ (ನ.26): ಕಪ್ಪು ಹಣದ ಕಡಿವಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ 500 ಮತ್ತು 1000 ರೂಪಾಯಿ ಮುಖ ಬೆಲೆಯ ನೋಟುಗಳನ್ನು ಅಮಾನ್ಯ ಮಾಡಿರುವುದನ್ನು​ ಬೆಂಬಲಿಸಿ ಧಾರವಾಡದ ವಿವಿಧ ಸಂಘಟನೆಗಳು ಬೃಹತ್​ ಮೆರವಣಿಗೆ ನಡೆಸಿದವು. 

ನೂರಾರು ಸಂಖ್ಯೆಯಲ್ಲಿ ಸೇರಿದ್ದ ವಿವಿಧ ಸಂಘಟನೆಗಳ ಕಾರ್ಯಕರ್ತರು 500, 2000 ಸಾವಿರದ ಹೊಸ ನೋಟುಗಳ ಪ್ರತಿಯನ್ನು ಪ್ರದರ್ಶಿಸುತ್ತಾ ನಗರದ ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿಗೆವರೆಗೆ ಮೆರವಣಿಗೆ ಹಮ್ಮಿಕೊಂಡಿದ್ದರು.

ದಾರಿಯುದ್ದಕ್ಕೂ ಪ್ರಧಾನಿ ಮೋದಿ ಪರ ಘೋಷಣೆ ಕೂಗುತ್ತಾ ನೋಟುಗಳನ್ನು ಬ್ಯಾನ್​ ಮಾಡಿದ್ದು ಉತ್ತಮ ಬೆಳವಣಿಗೆ, ಪ್ರತಿಪಕ್ಷಗಳು ಈ ಕ್ರಮವನ್ನು ವಿರೋಧಿಸುವುದು ಸರಿಯಲ್ಲ ಅಂತ ಆಕ್ಷೇಪ ವ್ಯಕ್ತಪಡಿಸಿದರು.