ಉತ್ತರ ಪ್ರದೇಶ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸಂಪೂರ್ಣ ಬಹುಮತದೊಂದಿಗೆ ಗೆಲುವನ್ನು ಸಾಧಿಸಲಿದ್ದಾರೆ ಎಂದು ಸುಪ್ರೀಂಕೋರ್ಟ್ ಮಾಜಿ ನ್ಯಾ. ಮಾರ್ಕಂಡೇಯ ಕಾಟ್ಜು ಹೇಳಿದ್ದಾರೆ.
ನವದೆಹಲಿ (ಜ.07): ಉತ್ತರ ಪ್ರದೇಶ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸಂಪೂರ್ಣ ಬಹುಮತದೊಂದಿಗೆ ಗೆಲುವನ್ನು ಸಾಧಿಸಲಿದ್ದಾರೆ ಎಂದು ಸುಪ್ರೀಂಕೋರ್ಟ್ ಮಾಜಿ ನ್ಯಾ. ಮಾರ್ಕಂಡೇಯ ಕಾಟ್ಜು ಹೇಳಿದ್ದಾರೆ.
ಬಿಜೆಪಿ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ಮಾಡಲಿದೆ. ಬಿಎಸ್ ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಸಂಪೂರ್ಣ ಬಹುಮತದೊಂದಿಗೆ ಚುನಾವಣೆಯಲ್ಲಿ ಗೆಲ್ಲಲಿದ್ದಾರೆ ಎಂದು ಕಾಟ್ಜು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಉತ್ತರ ಪ್ರದೇಶ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಜಾತಿ ಮತ್ತು ಧರ್ಮದ ಆಧಾರದ ಮೇಲೆ ಚುನಾವಣಾಗ ಗೆಲುವು ನಿರ್ಧಾರವಾಗುತ್ತದೆ. 2014 ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮೋದಿ ಅಲೆಯಲ್ಲಿ ಗೆಲುವನ್ನು ಪಡೆದುಕೊಂಡಿತು. ಆದರೆ ಈಗ ಅಲೆ ಹರಿಯುವುದಿಲ್ಲ. ನೋಟು ಅಮಾನ್ಯವು ಒಂದು ಅಲೆಯನ್ನು ಸೃಷ್ಟಿಸಿರಬಹುದು. ಆದರೆ ಉತ್ತರ ಪ್ರದೇಶ ಚುನಾವಣೆಯಲ್ಲಿ ಯಶಸ್ಸನ್ನು ಗಳಿಸುವುದಿಲ್ಲವೆಂದು ಕಾಟ್ಜು ಹೇಳಿದ್ದಾರೆ.
