25 ವರ್ಷದ ಹಾದಿಯಾಳ ವಿವಾಹವನ್ನು ಅಮಾನ್ಯಗೊಳಿಸಿ ಆಕೆಯನ್ನು ಹಿಂದೂ ಪೋಷಕರ ಸುಪರ್ದಿಗೆ ಒಪ್ಪಿಸಿ ಕೇರಳ ಹೈಕೋರ್ಟ್ ಆದೇಶ ಹೊರಡಿಸಿತ್ತು. ಹಾದಿಯಾ ಪತಿ ಶೆಫಿನ್ ಜಹಾನ್ ಅವರು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ತನ್ನ ಪತ್ನಿಯನ್ನು ಆಕೆಯ ಪೋಷಕರು ಬಲವಂತವಾಗಿ ಹಿಡಿದಿಟ್ಟುಕೊಂಡಿದ್ದಾರೆ ಎಂದೂ ಶೆಫಿನ್ ದೂರಿದ್ದರು.

ನವದೆಹಲಿ(ಅ. 03): 'ಲವ್ ಜಿಹಾದ್' ಆರೋಪದ ಪ್ರಕರಣದಲ್ಲಿ ಮುಸ್ಲಿಮ್ ವ್ಯಕ್ತಿಯನ್ನು ಮದುವೆಯಾಗಿದ್ದ ಹಿಂದೂ ಯುವತಿಯ ವಿವಾಹವನ್ನ ಅಮಾನ್ಯಗೊಳಿಸಿದ್ದ ಕೇರಳ ಹೈಕೋರ್ಟ್'ನ ತೀರ್ಪನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ವಯಸ್ಸಿಗೆ ಬಂದ ಹುಡುಗಿ ತನ್ನಿಚ್ಛೆಯಂತೆ ವಿವಾಹವಾದರೆ ಅದನ್ನು ತಡೆಯಲು ಆಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಹೈಕೋರ್ಟ್'ಗೂ ಕೂಡ ಈ ವಿವಾಹವನ್ನು ಅಮಾನ್ಯಗೊಳಿಸುವ ಅಧಿಕಾರವಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ.

25 ವರ್ಷದ ಹಾದಿಯಾಳ ವಿವಾಹವನ್ನು ಅಮಾನ್ಯಗೊಳಿಸಿ ಆಕೆಯನ್ನು ಹಿಂದೂ ಪೋಷಕರ ಸುಪರ್ದಿಗೆ ಒಪ್ಪಿಸಿ ಕೇರಳ ಹೈಕೋರ್ಟ್ ಆದೇಶ ಹೊರಡಿಸಿತ್ತು. ಹಾದಿಯಾ ಪತಿ ಶೆಫಿನ್ ಜಹಾನ್ ಅವರು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ತನ್ನ ಪತ್ನಿಯನ್ನು ಆಕೆಯ ಪೋಷಕರು ಬಲವಂತವಾಗಿ ಹಿಡಿದಿಟ್ಟುಕೊಂಡಿದ್ದಾರೆ ಎಂದೂ ಶೆಫಿನ್ ದೂರಿದ್ದರು.

ಏನಿದು ಪ್ರಕರಣ?
ಹೋಮಿಯೋಪಥಿ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ಹಿಂದೂ ಹುಡುಗಿ ಹಾದಿಯಾ ಅವರು ಶೆಫಿನ್ ಜಹಾನ್'ರನ್ನು ಪ್ರೀತಿಸುತ್ತಾರೆ. ಇಸ್ಲಾಮ್'ಗೆ ಮತಾಂತರಗೊಂಡು ಶೆಫಿನ್'ರನ್ನ ವಿವಾಹವಾಗುತ್ತಾರೆ. ಆದರೆ, ಹಾದಿಯಾಳ ಪೋಷಕರು ಇದೊಂದು ಲವ್ ಜಿಹಾದ್ ಕೇಸ್ ಎಂದು ಆರೋಪಿಸಿದ್ದಾರೆ. ತನ್ನ ಮಗಳ ಬ್ರೈನ್ ವಾಶ್ ಮಾಡಲಾಗಿದೆ. ಇಸ್ಲಾಮ್'ಗೆ ಮತಾಂತರ ಮಾಡುವ ವ್ಯವಸ್ಥಿತ ಪಿತೂರಿಗೆ ತನ್ನ ಮಗಳು ಬಲಿಯಾಗಿದ್ದಾಳೆ ಎಂದು ಹಾದಿಯಾಳ ತಂದೆ ಆರೋಪಿಸಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದರು. ಆಗ ಕೋರ್ಟ್ ಹಾದಿಯಾಳ ವಿವಾಹವನ್ನು ಅಮಾನ್ಯಗೊಳಿಸಿ ಆಕೆಯ ಪೋಷಕರ ಸುಪರ್ದಿಗೆ ಒಪ್ಪಿಸಿತ್ತು.

ಹೈಕೋರ್ಟ್ ತೀರ್ಪು ಪ್ರಶ್ನಿಸಿ ಹಾದಿಯಾ ಪತಿ ಶೆಫಿನ್ ಈಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಸುಪ್ರೀಂಕೋರ್ಟ್'ನಲ್ಲಿ ಮುಂದಿನ ವಿಚಾರಣೆ ಅ. 9ರಂದು ನಡೆಯಲಿದೆ.