ಇದ್ಯಾವ ಹೊಸ ರೋಗ..? ಮತ್ತೊಂದು ಮಾಸ್ ಸೂಸೈಡ್

First Published 15, Jul 2018, 2:06 PM IST
Mass Suicide In Jharkhand
Highlights

ದಿಲ್ಲಿಯಲ್ಲಿ ಒಂದೇ ಕುಟುಂಬದ 11 ಮಂದಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮಾಸುವ ಮುನ್ನವೇ ಇದೀಗ ಜಾರ್ಖಂಡ್ ನ ಹಜಾರಿ ಬಾಗ್ ಪ್ರದೇಶದಲ್ಲಿ ಒಂದೇ ಕುಟುಂಬದ 6 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹಜಾರಿಬಾಗ್ : ದಿಲ್ಲಿಯಲ್ಲಿ ಒಂದೇ ಕುಟುಂಬದ 11 ಮಂದಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ  ಮಾಸುವ ಮುನ್ನವೇ ಇದೀಗ ಜಾರ್ಖಂಡ್ ನ ಹಜಾರಿ ಬಾಗ್  ಪ್ರದೇಶದಲ್ಲಿ ಒಂದೇ ಕುಟುಂಬದ  6ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅತ್ಯಧಿಕ ಸಾಲವನ್ನು ಮಾಡಿಕೊಂಡಿದ್ದ ಕುಟುಂಬ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿದೆ ಎನ್ನಲಾಗಿದೆ. ಮನೆಯ ಚಾವಣಿಗೆ ನೇಣು ಬಿಗಿದುಕೊಂಡು ಎಲ್ಲರೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ತಕ್ಷಣವೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಪತ್ರವು ದೊರಕಿದ್ದು,  ಸಾಲದ ಹೊರೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಬರೆದಿಟ್ಟಿದ್ದಾರೆ.

loader