ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಪೋಟ| ಸ್ಫೋಟಕ್ಕೆ 19 ಕಾರ್ಮಿಕರ ದುರ್ಮರಣ| ಪಂಜಾಬ್'ನ ಗುರುದಾಸ್ ಪುರ್ ಜಿಲ್ಲೆಯ ಬಟಾಲಾದಲ್ಲಿ ಘಟನೆ| ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿಶಾಮಕ ದಳ| ಘಟನೆಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಪಂಜಾಬ್ ಸಿಎಂ ಅಮರಿಂದರ್ ಸಿಂಗ್|

ಬಟಾಲಾ(ಸೆ.04): ಪಂಜಾಬ್'ನ ಗುರುದಾಸ್ ಪುರ್ ಜಿಲ್ಲೆಯ ಬಟಾಲಾದಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 19 ಮಂದಿ ಸಜೀವ ದಹನವಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
Scroll to load tweet…

ಘಟನೆಯಲ್ಲಿ 10ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಕಾರ್ಖಾನೆಯಲ್ಲಿ ಇನ್ನೂ ಹಲವರು ಸಿಲುಕಿರುವ ಸಾಧ್ಯತೆ ಇದ್ದು, ಸ್ಥಳಕ್ಕೆ ಅಗ್ನಿಶಾಮಕದಳದವರು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

Scroll to load tweet…

ಇನ್ನು ಘಟನೆಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಪಂಜಾಬ್ ಸಿಎಂ ಅಮರಿಂದರ್ ಸಿಂಗ್, ಸ್ಫೋಟದಲ್ಲಿ ಪ್ರಾಣ ಕಳೆದುಕೊಂಡ ಮತ್ತು ಗಾಯಗೊಂಡವರ ಕುಟುಂಬದೊಂದಿಗೆ ಸರ್ಕಾರ ಇದೆ ಎಂದು ಭರವಸೆ ನೀಡಿದ್ದಾರೆ.