ಅಲ್ಪಸಂಖ್ಯಾತ ಮಾನ್ಯತೆ ತಡೆವಾದರೆ ಮೋದಿಗೆ ಒತ್ತಡ : ಮಾತೆ ಮಹಾದೇವಿ

First Published 26, Mar 2018, 9:23 AM IST
Mathe Mahadevi Talks About Lingayat Reservation
Highlights

ಲಿಂಗಾಯತ’ಕ್ಕೆ ಧಾರ್ಮಿಕ ಅಲ್ಪಸಂಖ್ಯಾತ ಮಾನ್ಯತೆ ನೀಡುವ ಸಂಬಂಧ ಕೇಂದ್ರ ಸರ್ಕಾರದಿಂದ ಸೂಕ್ತ ಸ್ಪಂದನೆ ದೊರೆಯುವುದು ವಿಳಂಬವಾದರೆ ದೆಹಲಿಗೆ ನಿಯೋಗ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹಾಕಲಾಗುವುದು ಎಂದು ಬಸವಧರ್ಮ ಪೀಠಾಧ್ಯಕ್ಷರಾದ ಮಾತೆ ಮಹಾದೇವಿ ಹೇಳಿದ್ದಾರೆ.

ಬೆಂಗಳೂರು: ‘ಲಿಂಗಾಯತ’ಕ್ಕೆ ಧಾರ್ಮಿಕ ಅಲ್ಪಸಂಖ್ಯಾತ ಮಾನ್ಯತೆ ನೀಡುವ ಸಂಬಂಧ ಕೇಂದ್ರ ಸರ್ಕಾರದಿಂದ ಸೂಕ್ತ ಸ್ಪಂದನೆ ದೊರೆಯುವುದು ವಿಳಂಬವಾದರೆ ದೆಹಲಿಗೆ ನಿಯೋಗ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹಾಕಲಾಗುವುದು ಎಂದು ಬಸವಧರ್ಮ ಪೀಠಾಧ್ಯಕ್ಷರಾದ ಮಾತೆ ಮಹಾದೇವಿ ಹೇಳಿದ್ದಾರೆ.

ರಾಷ್ಟ್ರೀಯ ಬಸವ ದಳ ವತಿಯಿಂದ ಭಾನುವಾರ ನಗರದ ಪುರಭವನದಲ್ಲಿ ಆಯೋಜಿಸಲಾಗಿದ್ದ 73ನೇ ವರ್ಧಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ಲಿಂಗಾಯತಕ್ಕೆ ಪ್ರತ್ಯೇಕ ಧಾರ್ಮಿಕ ಅಲ್ಪಸಂಖ್ಯಾತ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವ ರಾಜ್ಯ ಸರ್ಕಾರ ಈ ಸಂಬಂಧ ಅಧಿಸೂಚನೆಯನ್ನೂ ಹೊರಡಿಸಿದೆ.

ಅಲ್ಲಿಗೆ ರಾಜ್ಯ ಸರ್ಕಾರದ ಕೆಲಸ ಆದಂತಾಗಿದೆ. ಇನ್ನುಳಿದಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.

loader