ಆಗತಾನೆ ಜನಿಸಿದ ಅವಳಿ ಶಿಶುಗಳು ಮೃತಪಟ್ಟಿವೆ ಎಂದು ಹೇಳಿದ ವೈದ್ಯರ ಎಡವಟ್ಟಿನಿಂದಾಗಿ ಶಾಲಿಮರ್ ಬಾಗ್'ನಲ್ಲಿರುವ ಮ್ಯಾಕ್ಸ್ ಆಸ್ಪತ್ರೆಯ ಪರವಾನಗಿಯನ್ನು ದೆಹಲಿ ಸರ್ಕಾರ ರದ್ದುಗೊಳಿಸಿದೆ. ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಆಧಿಕೃತವಾಗಿ  ಘೋಷಿಸಿದ್ದಾರೆ.

ನವದೆಹಲಿ (ಡಿ.08): ಆಗತಾನೆ ಜನಿಸಿದ ಅವಳಿ ಶಿಶುಗಳು ಮೃತಪಟ್ಟಿವೆ ಎಂದು ಹೇಳಿದ ವೈದ್ಯರ ಎಡವಟ್ಟಿನಿಂದಾಗಿ ಶಾಲಿಮರ್ ಬಾಗ್'ನಲ್ಲಿರುವ ಮ್ಯಾಕ್ಸ್ ಆಸ್ಪತ್ರೆಯ ಪರವಾನಗಿಯನ್ನು ದೆಹಲಿ ಸರ್ಕಾರ ರದ್ದುಗೊಳಿಸಿದೆ. ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಆಧಿಕೃತವಾಗಿ ಘೋಷಿಸಿದ್ದಾರೆ.

ವೈದ್ಯರ ನಿರ್ಲಕ್ಷದಿಂದ ಆಸ್ಪತ್ರೆಯ ಪರವಾನಗಿಯನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ. ಈಗಾಗಲೇ ದಾಖಲಾಗಿರುವ ರೋಗಿಗಳಿಗೆ ಸಂಪೂರ್ಣ ಚಿಕಿತ್ಸೆ ನೀಡಲಾಗುವುದು. ಆದರೆ ಹೊಸದಾಗಿ ಯಾರನ್ನು ಆಸ್ಪತ್ರೆಗೆ ಸೇರಿಸಿಕೊಳ್ಳುವುದಿಲ್ಲ ಎಂದು ಸತ್ಯೇಂದ್ರ ಜೈನ್ ಹೇಳಿದ್ದಾರೆ. ಆಸ್ಪತ್ರೆ ಈ ಕೂಡಲೇ ಹೊರ ರೋಗಿಗಳ ವಿಭಾಗ ಒಳ ರೋಗಿಗಳ ವಿಭಾಗದ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಬೇಕು ಎಂದಿದ್ದಾರೆ.

ಸರ್ಕಾರದ ಈ ನಿರ್ಧಾರ ಸರಿಯಲ್ಲ. ನಾವಿದನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಆಸ್ಪತ್ರೆ ಆಡಳಿತ ಮಂಡಳಿ ಹೇಳಿದೆ.