ಉತ್ತರ ಪ್ರದೇಶದಲ್ಲಿ ದಲಿತರು, ಹಿಂದುಳಿದ ಹಾಗೂ ದುರ್ಬಲ ವರ್ಗದವರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಕುರಿತು ಮಾತನಾಡಲು ನನಗೆ ಅವಕಾಶ ನೀಡಲಾಗುತ್ತಿಲ್ಲ. ಆಡಳಿತ ಪಕ್ಷ ಈ ರೀತಿ ನಡೆಸಿಕೊಳ್ಳುತ್ತಿರುವುದರಿಂದ ನಾನು ರಾಜ್ಯಸಭೆಗೆ ರಾಜೀನಾಮೆ ನೀಡಿದ್ದೇನೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.

ನವದೆಹಲಿ: ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿಯವರು ರಾಜ್ಯಸಭಾ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಉತ್ತರ ಪ್ರದೇಶದಲ್ಲಿ ದಲಿತರು, ಹಿಂದುಳಿದ ಹಾಗೂ ದುರ್ಬಲ ವರ್ಗದವರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಕುರಿತು ಮಾತನಾಡಲು ನನಗೆ ಅವಕಾಶ ನೀಡಲಾಗುತ್ತಿಲ್ಲ. ಆಡಳಿತ ಪಕ್ಷ ಈ ರೀತಿ ನಡೆಸಿಕೊಳ್ಳುತ್ತಿರುವುದರಿಂದ ನಾನು ರಾಜ್ಯಸಭೆಗೆ ರಾಜೀನಾಮೆ ನೀಡಿದ್ದೇನೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.

ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಕುರಿತು ರಾಜ್ಯಸಭೆಯಲ್ಲಿ ತನಗೆ ಮಾತನಾಡಲು ಅವಕಾಶ ನಿರಾಕರಿಸಲಾಗುತ್ತಿದೆ ಎಂದು ಆಕ್ರೊಶ ವ್ಯಕ್ತಪಡಿಸಿದ್ದ ಮಾಯಾವತಿ, ರಾಜೀನಾಮೆ ನೀಡುವುದಾಗಿ ಇಂದು ಬೆಳಗ್ಗೆ ಬೆದರಿಕೆ ಹಾಕಿದ್ದರು.

ಬೆಜೆಪಿ ಅಧಿಕಾರಕ್ಕೆ ಬಂದಾಗಿನಿಂದ ದಲಿತರು ಹಾಗೂ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಹೆಚ್ಚಾಗಿದೆ ಎಂದು ಹೇಳಿದ ಮಾಯಾವತಿ, ಸಹರನ್’ಪುರದಲ್ಲಿ ನಡೆದ ಗಲಭೆಯನ್ನು ಯೋಗಿ ಆದಿತ್ಯನಾಥ್ ಸರ್ಕಾರ ಬಹಳ ಕೆಟ್ಟ ರೀತಿಯಲ್ಲಿ ನಿರ್ವಹಿಸಿದೆ ಎಂದು ಟೀಕಿಸಿದರು.