ಲಖನೌ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರಪ್ರದೇಶದಲ್ಲಿ ಬಿಎಸ್ಪಿ ಹಾಗೂ ಸಮಾಜವಾದಿ ಪಕ್ಷ ಮಾಡಿಕೊಂಡಿದ್ದ ಗಠಬಂಧನ ಮುರಿದು ಬೀಳುವ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸ ತೊಡಗಿವೆ.

ಉತ್ತರಪ್ರದೇಶದ 11 ಶಾಸಕರು ಲೋಕಸಭೆಗೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಎದುರಾಗಲಿರುವ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ನಿರ್ಧರಿಸಿದ್ದಾರೆ. ಅಲ್ಲದೆ, ಯಾವುದೇ ಮಿತ್ರಕೂಟಗಳ ಮೇಲೆ ಅವಲಂಬಿತರಾಗದೇ ಪಕ್ಷ ಸಂಘಟಿಸಿ ಎಂದು ಬಿಎಸ್ಪಿ ಮುಖಂಡರಿಗೆ ಕರೆ ಕೊಟ್ಟಿದ್ದಾರೆ. ಜತೆಗೆ ಬಿಎಸ್ಪಿ ನಾಯಕರ ಎದುರು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರ ಬಗ್ಗೆ ಲೇವಡಿ ಮಾಡಿದ್ದಾರೆ. ಇದೆಲ್ಲಾ ಗಠಬಂಧನ ಮುರಿದುಬೀಳುವ ಸಂಕೇತ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ಉತ್ತರಪ್ರದೇಶದಲ್ಲಿ ಗಠಬಂಧನ ಮೂಲಕ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯನ್ನು ಮಾಯಾವತಿ ಹೊಂದಿದ್ದರು. ಅದು ವಿಫಲವಾಗಿರುವ ಹಿನ್ನೆಲೆಯಲ್ಲಿ ಅವರು ಹೊರಬರಲು ಮುಂದಾಗಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಸಾಮಾನ್ಯವಾಗಿ ಬಿಎಸ್ಪಿ ಉಪಚುನಾವಣೆಗಳಿಗೆ ಸ್ಪರ್ಧಿಸುವುದಿಲ್ಲ. ಆದರೆ ಈ ಬಾರಿ 11 ವಿಧಾನಸಭೆ ಉಪಚುನಾವಣೆಗಳಿಗೆ ಏಕಾಂಗಿಯಾಗಿ ಸ್ಪರ್ಧಿಸಿರುವುದು ಮಹತ್ವ ಪಡೆದುಕೊಂಡಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರಪ್ರದೇಶದಲ್ಲಿ ಬಿಎಸ್ಪಿ ಹಾಗೂ ಸಮಾಜವಾದಿ ಪಕ್ಷ ಮಾಡಿಕೊಂಡಿದ್ದ ಗಠಬಂಧನ ಮುರಿದು ಬೀಳುವ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸ ತೊಡಗಿವೆ.