ನಮ್ಮ ಬಳಿ ಇರುವುದು ಕೇವಲ ಕುಡಿಯುವ ನೀರು ಎಂಬುವುದನ್ನ ಮನವರಿಕೆ ಮಾಡಿಕೊಟ್ಟಿದ್ದೇವೆ.
ನವದೆಹಲಿ(ಸೆ.20): ಕಾವೇರಿ ನದಿ ನೀರು ವಿಚಾರದಲ್ಲಿ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿರುವ ಬಗ್ಗೆ ಜನಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ನಾಳೆ ನಡೆಯಲಿರುವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ಧಾರೆ.

ಈ ಹಿಂದೆ ಸುಪ್ರೀಂಕೋರ್ಟ್ ಆದೇಶಿಸಿದಂತೆ 15 ಸಾವಿರ ಕ್ಯೂಸೆಕ್ಸ್ ಮತ್ತು 12 ಸಾವಿರ ಕ್ಯೂಸೆಕ್ಸ್ ನೀರು ಬಿಡುವ ಆದೇಶ ಪಾಲಿಸಿದ್ದೇವೆ. ಈಗ ನಮ್ಮ ಬಳಿ ಇರುವುದು ಕೇವಲ ಕುಡಿಯುವ ನೀರು ಎಂಬುವುದನ್ನ ಮನವರಿಕೆ ಮಾಡಿಕೊಟ್ಟಿದ್ದೇವೆ. ಆದರೂ, ನೀರು ಬಿಡುವ ಆದೇಶ ಮಾಡಲಾಗಿದೆ. ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತೆ ಎಂದು ಎಂ.ಬಿ. ಪಾಟೀಲ್ ಹೇಳಿದ್ದಾರೆ.
