ಗುಡ್ ನ್ಯೂಸ್ : ಆರೋಗ್ಯ ವಿಮೆಯಲ್ಲಿ ಭರ್ಜರಿ ಏರಿಕೆ?

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 3, Aug 2018, 10:56 AM IST
Medical Health insurance limits may Hike To Rs 5 lakh
Highlights

ರಾಜ್ಯದಲ್ಲಿ ಬಡ ಕುಟುಂಬಗಳಿಗೆ ಇದ್ದ ಆರೋಗ್ಯ ವಿಮಾ ಮೊತ್ತವನ್ನು ಏರಿಕೆ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಸದ್ಯ ಇರುವ 1.5 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡುವ ಸಾಧ್ಯತೆ ಇದೆ. 

ಬೆಂಗಳೂರು :  ಆರೋಗ್ಯ ಕರ್ನಾಟಕ ಯೋಜನೆಯಡಿ ಪ್ರತಿ ಕುಟುಂಬಕ್ಕೆ ಇರುವ ವೈದ್ಯಕೀಯ ವೆಚ್ಚದ ಮಿತಿಯನ್ನು 1.5 ಲಕ್ಷ ರು. ಗಳಿಂದ 5 ಲಕ್ಷ ರು.ವರೆಗೆ ಹೆಚ್ಚಳ ಮಾಡಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಹಣಕಾಸು ಇಲಾಖೆ ಅನುಮೋದನೆ ಪಡೆದು ಸಚಿವ ಸಂಪುಟದಲ್ಲಿ ನಿರ್ಧರಿಸಲಾಗುವುದು ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,

 ರಾಜ್ಯದಲ್ಲಿ ‘ಆರೋಗ್ಯ ಕರ್ನಾಟಕ’ ಹೆಸರಿನಲ್ಲಿ ಸಾರ್ವತ್ರಿಕ ಆರೋಗ್ಯ ವಿಮಾ ಯೋಜನೆ ಪ್ರಾರಂಭಿಸಿ ಈಗಾಗಲೇ ಸೇವೆ ನೀಡಲಾಗುತ್ತಿದೆ. ಯೋಜನೆಯಡಿ 1.13 ಕೋಟಿ ಬಿಪಿಎಲ್ ಕುಟುಂಬಗಳಿಗೆ ವಾರ್ಷಿಕ 1.5 ಲಕ್ಷ ರು. ಹಾಗೂ ಉಳಿದ ಎಪಿಎಲ್ ಕುಟುಂಬಗಳಿಗೆ ಶೇ.30 ರಷ್ಟು ವೆಚ್ಚವನ್ನು ಸರ್ಕಾರ ಭರಿಸುತ್ತಿದೆ. ಒಟ್ಟು 1.40 ಕೋಟಿ ಕುಟುಂಬಗಳು ಈ ಯೋಜನೆಯಡಿ ಪ್ರಯೋಜನ ಪಡೆಯಬಹುದು.

ಇದೀಗ ಕೇಂದ್ರ ಸರ್ಕಾರವು ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆಯಡಿ ‘ಆಯುಷ್ಮಾನ್ ಭಾರತ’ (ಮೋದಿ ಕೇರ್) ವಿಮಾ ಯೋಜನೆ ಜಾರಿಗೊಳಿಸಲಾಗುತ್ತಿದೆ. ಇದರಡಿ ಪ್ರತಿ ಬಿಪಿಎಲ್ ಕುಟುಂಬಕ್ಕೆ ವಾರ್ಷಿಕ 5 ಲಕ್ಷ ರು. ವೈದ್ಯಕೀಯ ವೆಚ್ಚ ಭರಿಸಲಾಗುವುದು. ಯೋಜನೆಯಡಿ ರಾಜ್ಯದ 62 ಲಕ್ಷ ಬಿಪಿಎಲ್ ಕುಟುಂಬಗಳು ಸೌಲಭ್ಯ ಪಡೆಯಲಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಹೀಗಾಗಿ ಆರೋಗ್ಯ ಕರ್ನಾಟಕ ಯೋಜನೆಯಡಿ ಬರುವುದಾಗಿ ಗುರುತಿಸಿದ್ದ 1.13 ಕೋಟಿ ಕುಟುಂಬಗಳಿಂದ 62 ಲಕ್ಷ ಕುಟುಂಬಗಳ ಹೊರೆ ರಾಜ್ಯ ಸರ್ಕಾರಕ್ಕೆ ಕಡಿಮೆಯಾಗಲಿದೆ. ಹೀಗಾಗಿ ಆರೋಗ್ಯ ಕರ್ನಾಟಕ ಯೋಜನೆಯಡಿ ಬರಲಿರುವ ಸುಮಾರು 51 ಲಕ್ಷ ಕುಟುಂಬಗಳಿಗೂ ಚಿಕಿತ್ಸಾ ವೆಚ್ಚ ಮಿತಿ ಹೆಚ್ಚಳ ಮಾಡಲು ಚಿಂತನೆ ಮಾಡಿದ್ದೇವೆ ಎಂದು ಪಾಟೀಲ ಹೇಳಿದರು.

loader