ಬೀದರ್ (ಮಾ. 05):  ವಿಷ ಸೇವಿಸಿದ ಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ. 

ಬ್ರಿಮ್ಸ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಉಮಾ (21) ಸಾವನ್ನಪ್ಪಿರುವ ದುರ್ದೈವಿ.  ಬೆಳಿಗ್ಗೆ 5 ಗಂಟೆ ಸುಮಾರಿಗೆ ವಿಷ ಸೇವಿಸಿದ ಉಮಾ ಚಿಕಿತ್ಸೆ ಫಲಕಾತಿಯಾಗದೇ ಬೀದರ್ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. 

ವಿಷ ಸೇವಿಸಿರುವುದಕ್ಕೆ ಕಾರಣ ತಿಳಿದು ಬಂದಿಲ್ಲ. ಸ್ಥಳಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.