ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿ ಕಾಶ್ಮೀರಕ್ಕೆ ಪ್ರತ್ಯೇಕ ಸ್ಥಾನಮಾನ ವಿಚಾರದ ಬಗ್ಗೆ ಚರ್ಚೆ ನಡೆಸಿದರು. ಈಗಾಗಲೇ ಪಿಡಿಪಿ-ಬಿಜೆಪಿ ಮೈತ್ರಿ ಸಂದರ್ಭದಲ್ಲಿ ಹೇಳಿದಂತೆ ಪರಿಚ್ಛೇದ 370 ರಲ್ಲಿ ನಾವು ಇದರಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದರು.
ನವದೆಹಲಿ (ಆ.11): ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿ ಕಾಶ್ಮೀರಕ್ಕೆ ಪ್ರತ್ಯೇಕ ಸ್ಥಾನಮಾನ ವಿಚಾರದ ಬಗ್ಗೆ ಚರ್ಚೆ ನಡೆಸಿದರು. ಈಗಾಗಲೇ ಪಿಡಿಪಿ-ಬಿಜೆಪಿ ಮೈತ್ರಿ ಸಂದರ್ಭದಲ್ಲಿ ಹೇಳಿದಂತೆ ಪರಿಚ್ಛೇದ 370 ರಲ್ಲಿ ನಾವು ಇದರಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದರು.
ಸುಪ್ರೀಂಕೋರ್ಟ್’ನಲ್ಲಿ ಪರಿಚ್ಛೇದ 35-ಎ ವಿಚಾರಣೆ ನಡೆಯುತ್ತಿದೆ. ಪರಿಚ್ಛೇದ 35-ಎ ರಲ್ಲಿ ಕಾಶ್ಮೀರದ ಶಾಶ್ವತ ನಿವಾಸಿಗಳಿಗೆ ಅವರ ಹಕ್ಕುಗಳನ್ನು ನಿರ್ಧರಿಸಲು ಶಾಸನಸಭೆಗೆ ಅಧಿಕಾರವನ್ನು ನೀಡಲಾಗಿದೆ. ಇದರ ಬಗ್ಗೆ ಸುಪ್ರೀಂನಲ್ಲಿ ವಿಚಾರಣೆ ನಡೆಯುತ್ತಿದ್ದು ಸರ್ಕಾರಕ್ಕೆ ಸವಾಲಾಗಿದೆ.
ಕಾಶ್ಮೀರವು ಸಾಕಷ್ಟು ಸಮಸ್ಯೆಯನ್ನು ಎದುರಿಸುತ್ತಿದೆ. ಇಲ್ಲಿನ ಜನತೆ ಆಸ್ಮಿತೆಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಕಾಶ್ಮೀರ ದೇಶದ ಒಂದು ಪ್ರಮುಖ ಭಾಗ ಎಂದು ಮುಫ್ತಿ ಹೇಳಿದ್ದಾರೆ.
ನಾವು ಆರ್ಟಿಕಲ್ 370 ಹಾಗೂ 35 ನ್ನು ಗೌರವಿಸುತ್ತೇವೆ. ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮೋದಿ ಭರವಸೆ ನೀಡಿದ್ದಾರೆ.
