ತಿರುವನಂತಪುರಂ, (ಜೂನ್.19): ಅಶ್ಲೀಲ ಫೋಟೋಗಳನ್ನು ಇಟ್ಟುಕೊಳ್ಳುವುದು ಅಪರಾಧವಲ್ಲ ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿದೆ.

ಮಹಿಳೆಯರ ಅಸಭ್ಯ ಪ್ರದರ್ಶನ ತಡೆ ಕಾಯಿದೆ ಅಡಿ ಮಹಿಳೆಯ ಅಶ್ಲೀಲ ಫೋಟೋಗಳನ್ನು ಹೊಂದಿದ ಮಾತ್ರಕ್ಕೆ ಅದು ಶಿಕ್ಷಾರ್ಹ ಅಪರಾಧವಾಗುವುದಿಲ್ಲ. ಆದರೆ ಮಹಿಳೆಯ ಅಶ್ಲೀಲ ಫೋಟೋಗಳನ್ನು ಪ್ರಕಟಿಸುವುದು ಮತ್ತು ವಿತರಿಸುವುದು ಕಾನೂನನಿನಡಿ ಶಿಕ್ಷಾರ್ಹವಾಗಿರುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಈ ಮೂಲಕ 2008ರಲ್ಲಿ ಓರ್ವ ಪುರುಷ ಮತ್ತು ಮಹಿಳೆಯ ವಿರುದ್ಧದ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಿದೆ.

ಕತುವಾ ರೇಪ್ ಕೇಸ್: ಅರ್ಚಕ ಸೇರಿ 6 ಮಂದಿ ದೋಷಿ!

ಏನಿದು ಪ್ರಕರಣ?:
ಕೊಲ್ಲಂ ಪೊಲೀಸರು ಬಸ್ ನಿಲ್ದಾಣದಲ್ಲಿ  ಶಂಕಿತ ಓರ್ವ ಮಹಿಳೆ ಹಾಗೂ ಪುರುಷನನ್ನು ವಿಚಾರಣೆ ನಡೆಸಿ, ಬ್ಯಾಗ್‍ನಲ್ಲಿದ್ದ ಕ್ಯಾಮೆರಾವನ್ನು ವಶಕ್ಕೆ ಪಡೆದಿದ್ದರು.

ಈ ವೇಳೆ ಪುರುಷನ ಕ್ಯಾಮೆರಾದಲ್ಲಿ ಮಹಿಳೆಯ ಅಶ್ಲೀಲ ಫೋಟೋಗಳಿದ್ದವು. ಹೀಗಾಗಿ ಇಬ್ಬರನ್ನೂ ಬಂಧಿಸಿ, ಕ್ಯಾಮೆರಾವನ್ನು ವಶಕ್ಕೆ ಪಡೆದಿದ್ದ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಕುರಿತು ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಕ್ಯಾಮೆರಾದಲ್ಲಿರುವ ಫೋಟೋಗಳನ್ನು ಪ್ರಕಟಿಸಿದ್ದಾರೆ ಎಂಬುದಕ್ಕೆ ಯಾವುದೇ ಸೂಕ್ತ ದಾಖಲೆಗಳಿಲ್ಲ. ಅಶ್ಲೀಲ ಫೋಟೋಗಳನ್ನು ಇಟ್ಟುಕೊಳ್ಳುವುದು ಅಪರಾಧವಲ್ಲ. ಹೀಗಾಗಿ ಆರೋಪಿಗಳ ವಿರುದ್ಧ ಪ್ರಕರಣವನ್ನು ರದ್ದುಗೊಳಿಸಲಾಗಿದೆ ಎಂದು ಕೋರ್ಟ್ ತಿಳಿಸಿದೆ.