ಮುಂದಿನ ದಿನಗಳಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ನಮ್ಮ ಮೆಟ್ರೋ ಸಂಪರ್ಕ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ಮುಂದಿನ ದಿನಗಳಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ನಮ್ಮ ಮೆಟ್ರೋ ಸಂಪರ್ಕ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೆಟ್ರೋ ಮೊದಲ ಹಂತ ಲೋಕಾರ್ಪಣೆಗೊಂಡ ಸಂದರ್ಭದಲ್ಲಿ, ಜಾಗತಿಕ ಕ್ರಿಯಾಶೀಲ ನಗರಿಯಾದ ಬೆಂಗಳೂರಿನ ಬೆಳವಣಿಗೆಯ ವೇಗಕ್ಕೆ ಅನುಗುಣವಾಗಿ ಸಾರ್ವಜನಿಕ ಸಾರಿಗೆ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ನಮ್ಮ ಮೆಟ್ರೋ ಒಂದು ಮೈಲುಗಲ್ಲಾಗಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನ 4 ದಿಕ್ಕುಗಳಿಗೂ ನಮ್ಮ ಮೆಟ್ರೋ ಸಂಪರ್ಕ ಕಲ್ಪಿಸಿದೆ. ಜನತೆಗೆ ಗುಣಮಟ್ಟದ ಜೀವನಾವಶ್ಯಕತೆಗಳನ್ನು ಪೂರೈಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದಿರುವ ಅವರು, ನಮ್ಮ ಮೆಟ್ರೋವಿನ 2ನೇ ಹಂತದ ಅನುಷ್ಠಾನ ಕಾರ್ಯ ಪ್ರಗತಿಯಲ್ಲಿದ್ದು 72 ಕಿ.ಮೀ ಗಳ ಮಾರ್ಗ ನಿರ್ಮಾಣದೊಂದಿಗೆ 15 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲಿದೆ ಎಂದು ಅವರು ಹೇಳಿದ್ದಾರೆ.