Asianet Suvarna News Asianet Suvarna News

5.5ರಿಂದ 7 ವರ್ಷದವರೆಗೂ 1ನೇ ಕ್ಲಾಸ್‌ ಪ್ರವೇಶ

ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳಲ್ಲಿ ಒಂದನೇ ತರಗತಿಗೆ ಪ್ರವೇಶ ಪಡೆಯಲು ನಿಗದಿಪಡಿಸಿದ್ದ ವಯೋಮಿತಿಯನ್ನು ಸಡಿಲಗೊಳಿಸಿರುವ ಶಿಕ್ಷಣ ಇಲಾಖೆಯು, 5 ವರ್ಷದ 5 ತಿಂಗಳಿಂದ ಏಳು ವರ್ಷದವರೆಗೂ ಮಕ್ಕಳನ್ನು ಶಾಲೆಗೆ ಸೇರಿಸಬಹುದು ಎಂದು ಸೂಚಿಸಿ ಬುಧವಾರ ಆದೇಶ ಹೊರಡಿಸಿದೆ.

Minimum age for admission to Class 1 lowered to 5.5 years

ಬೆಂಗಳೂರು : ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳಲ್ಲಿ ಒಂದನೇ ತರಗತಿಗೆ ಪ್ರವೇಶ ಪಡೆಯಲು ನಿಗದಿಪಡಿಸಿದ್ದ ವಯೋಮಿತಿಯನ್ನು ಸಡಿಲಗೊಳಿಸಿರುವ ಶಿಕ್ಷಣ ಇಲಾಖೆಯು, 5 ವರ್ಷದ 5 ತಿಂಗಳಿಂದ ಏಳು ವರ್ಷದವರೆಗೂ ಮಕ್ಕಳನ್ನು ಶಾಲೆಗೆ ಸೇರಿಸಬಹುದು ಎಂದು ಸೂಚಿಸಿ ಬುಧವಾರ ಆದೇಶ ಹೊರಡಿಸಿದೆ.

ಈ ಆದೇಶವು 2018-19ನೇ ಶೈಕ್ಷಣಿಕ ಸಾಲಿನಿಂದಲೇ ಅನುಷ್ಠಾನಕ್ಕೆ ಬರಲಿದೆ. ಈವರೆಗೆ ಮಕ್ಕಳನ್ನು ಒಂದನೇ ತರಗತಿಗೆ ದಾಖಲು ಮಾಡಿಸಲು 5 ವರ್ಷ 10 ತಿಂಗಳಿನಿಂದ 6 ವರ್ಷ 10 ತಿಂಗಳ ಅವಧಿ ಯನ್ನು ನಿಗದಿಪಡಿಸಿತ್ತು. ಆದರೆ, ಕೇಂದ್ರೀಯ ವಿದ್ಯಾಲಯಗಳಲ್ಲಿಯೂ ಗರಿಷ್ಠ ವಯಸ್ಸು ಏಳು ವರ್ಷಕ್ಕೆ ನಿಗದಿ ಮಾಡಿದ್ದು, ಅದರಂತೆಯೇ ರಾಜ್ಯದಲ್ಲಿಯೂ ಏಳು ವರ್ಷಕ್ಕೆ ನಿಗದಿ ಮಾಡಲಾಗಿದೆ ಎಂದು ತಿಳಿಸಿದೆ.

5 ವರ್ಷ 10 ತಿಂಗಳಿಗಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಖಾಸಗಿ ಶಾಲೆಗಳು ಯುಕೆಜಿ ಪೂರ್ವ ಪ್ರಾಥಮಿಕ ಶಾಲೆಗಳಿಗೆ ದಾಖಲು ಮಾಡಿಕೊಳ್ಳುವ ಮೂಲಕ ಪರೋಕ್ಷವಾಗಿ ಸರ್ಕಾರಿ ಶಾಲೆಗಳ ದಾಖಲಾತಿ ಕಡಿಮೆಯಾಗಲು ಕಾರಣವಾಗುತ್ತಿದ್ದವು. ಇದೇ ಕಾರಣದಿಂದಲೇ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರನ್ನು ಭೇಟಿ ಮಾಡಿ ಶಾಲಾ ಪ್ರವೇಶಕ್ಕೆ ನಿಗದಿ ಪಡಿಸಿರುವ ವಯೋಮಿತಿ ಸಡಿಲಗೊಳಿಸುವಂತೆ ಮನವಿ ಮಾಡಿತ್ತು. ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿದ ಶಿಕ್ಷಣ ಇಲಾಖೆಯು ವಯೋಮಿತಿ ಸಡಿಲಿಸಿ ಬುಧವಾರ ಆದೇಶ ಹೊರಡಿಸಿದೆ.

Follow Us:
Download App:
  • android
  • ios