ಬೆಂಗಳೂರು [ಆ.29]: ಕಾಂಗ್ರೆಸ್‌ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲು ಎಳೆಯುವವರ ಸಂಖ್ಯೆ ಹೆಚ್ಚಾಗಿದ್ದು, ಮೊದಲು ತಮ್ಮ ಕಾಲು ಯಾರೂ ಎಳೆಯದಂತೆ ಸಿದ್ದರಾಮಯ್ಯ ನೋಡಿಕೊಳ್ಳಲಿ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಇನ್ನೂ ಸರ್ಕಾರ ಟೇಕಾಫ್‌ ಆಗಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬುಧವಾರ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ ಪಕ್ಷದ ಪ್ರಶ್ನಾತೀತ ನಾಯಕ ಎಂದು ಭಾವಿಸಿದ್ದೆವು. ಆದರೆ ಇನ್ನೂ ಕೂಡ ಕಾಂಗ್ರೆಸ್‌ನಲ್ಲಿ ವಿಪಕ್ಷ ನಾಯಕ ಯಾರು ಎಂಬುದೇ ನಿರ್ಧಾರವಾಗಿಲ್ಲ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರು ಮೊದಲು ತಮ್ಮ ಕಾಲು ಯಾರೂ ಎಳೆಯದಂತೆ ನೋಡಿಕೊಳ್ಳಲಿ ಎಂದು ಲೇವಡಿ ಮಾಡಿದರು.

ರಾಜ್ಯ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಕಾಟಾಚಾರಕ್ಕೆ ಪ್ರವಾಹಪೀಡಿತ ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದಾರೆ ಎಂದು ಸುಳ್ಳು ಆರೋಪ ಮಾಡುವುದು ಸರಿಯಲ್ಲ. ಪ್ರತಿಕೂಲ ಹವಾಮಾನದಿಂದಾಗಿ ಮುಖ್ಯಮಂತ್ರಿಗಳಿದ್ದ ಹೆಲಿಕಾಪ್ಟರ್‌ ಇಳಿಯಲು ವಿಳಂಬ ಆಯಿತು. ಅನ್ನ ಬೆಂದಿದೆಯೇ ಎಂದು ತಿಳಿಯಲು ಎಲ್ಲ ಅಕ್ಕಿ ನೋಡಬೇಕಿಲ್ಲ. ಇನ್ನು ನಾಲ್ಕೈದು ಗ್ರಾಮಕ್ಕೆ ಹೋಗಬೇಕಿತ್ತು. ಸಮಯದ ಅಭಾವದಿಂದಾಗಿ ಹೋಗಲು ಸಾಧ್ಯವಾಗಿಲ್ಲ ಎಂದರು.