ಹುಬ್ಬಳ್ಳಿ: ಅತೃಪ್ತ ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿಕೆಗೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಖಡಕ್‌ ಉತ್ತರ ನೀಡಿದ್ದಾರೆ. ಶಾಸಕರು ನಮ್ಮ ಸಂಪರ್ಕದಲ್ಲೂ ಇದ್ದಾರೆ. ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿರುವ ಯಡಿಯೂರಪ್ಪ, ಮೊದಲು ಮುಹೂರ್ತ ನಿಗದಿ ಮಾಡಿಕೊಳ್ಳಲಿ ಎಂದು ಸವಾಲು ಹಾಕಿದ್ದಾರೆ.

ಶುಕ್ರವಾರ ಇಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಡಿ.ಕೆ.ಶಿವಕುಮಾರ್‌, ಬಿಜೆಪಿಯು ಮೈತ್ರಿ ಸರ್ಕಾರವನ್ನು ಬೀಳಿಸುವ ಪ್ರಯತ್ನ ಮಾಡುತ್ತಿದೆ. ಯಡಿಯೂರಪ್ಪ ಮುಂದಿನ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಲೇ ಇದ್ದಾರೆ. ಅವರು ಮೊದಲು ಮುಹೂರ್ತ ನಿಗದಿ ಮಾಡಿಕೊಳ್ಳಲಿ ಎಂದು ಸವಾಲು ಹಾಕಿದರು.

ಅಲ್ಲದೆ, ಯಡಿಯೂರಪ್ಪ ಜತೆಗೆ 20 ಅಲ್ಲ, 222 ಶಾಸಕರು ಇರಬಹುದು. ಅವರ ಜತೆಗೆ ಸಂಪರ್ಕದಲ್ಲಿರುವ 222 ಶಾಸಕರು ನಮ್ಮ ಸಂಪರ್ಕದಲ್ಲೂ ಇದ್ದಾರೆ ಎಂದೂ ಸಚಿವ ಡಿಕೆಶಿ ತಿರುಗೇಟು ನೀಡಿದರು.