ರಾಜೀನಾಮೆ ನೀಡುತ್ತಾರಾ ಸಚಿವ ಡಿ.ಕೆ ಶಿವಕುಮಾರ್..?

Minister DK Shivakumar need not to resign Says CM Kumaraswamy
Highlights

ಆದಾಯ ತೆರಿಗೆ ಇಲಾಖೆ ಯಿಂದ ನ್ಯಾಯಾಲಯದಲ್ಲಿ ದೂರು ದಾಖಲಾದ ಮಾತ್ರಕ್ಕೆ ಸಚಿವ ಡಿ.ಕೆ. ಶಿವಕುಮಾರ್ ಅವರ ರಾಜೀನಾಮೆ ಕೇಳುವ ಪ್ರಶ್ನೆ ಉದ್ಭವವಾಗುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.
ಕುಮಾರಸ್ವಾಮಿ ಹೇಳಿದ್ದಾರೆ. 

ರಾಮನಗರ: ಆದಾಯ ತೆರಿಗೆ ಇಲಾಖೆ ಯಿಂದ ನ್ಯಾಯಾಲಯದಲ್ಲಿ ದೂರು ದಾಖಲಾದ ಮಾತ್ರಕ್ಕೆ ಸಚಿವ ಡಿ.ಕೆ. ಶಿವಕುಮಾರ್ ಅವರ ರಾಜೀನಾಮೆ ಕೇಳುವ ಪ್ರಶ್ನೆ ಉದ್ಭವವಾಗುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ತಾಲೂಕಿನ ಪೇಟೆ ಕುರುಬರಹಳ್ಳಿಯ ಉದ್ಭವ ಆಂಜನೇಯಸ್ವಾಮಿ ಆಲಯ ಪ್ರತಿಷ್ಠಾನ ಹಾಗೂ ಮಹಾ ಕುಂಭಾಭಿಷೇಕ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ್ತೊಮ್ಮೆ ಪ್ರಭಾವಿ ಕಾಂಗ್ರೆಸ್ ನಾಯಕನ ಪರವಾಗಿ ಬ್ಯಾಟಿಂಗ್ ನಡೆಸಿದರು.

ದೂರಿನ ವಿರುದ್ಧ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಕಾನೂನಿನ ಪ್ರಕಾರ ಹೋರಾಡುವ ಅವಕಾಶವಿದ್ದು, ಹೋರಾಟ ಮಾಡಲಿ ಎಂದು ಅವರು ಪುನರುಚ್ಚರಿಸಿದರು. 

loader