ಇಂಧನ ಸಚಿವ ಡಿ ಕೆ ಶಿವಕುಮಾರ್ ಹಾಗೂ ಅವರ ಸಂಬಂಧಿಕರ ಮನೆ ಮೆಲೆ ಐಟಿ ದಾಳಿ ನಡೆದಿರುವುದನ್ನು ಖಂಡಿಸಿ ಅವರ ಬೆಂಬಲಿಗರು ಸದಾಶಿವ ನಗರದಲ್ಲಿರುವ ನಿವಾಸದ ಮುಂದೆ ಪ್ರತಿಭಟನೆಗೆ ಮುಂದಾಗಿದ್ದು 100 ಜನರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಬೆಂಗಳೂರು (ಆ.02): ಇಂಧನ ಸಚಿವ ಡಿ ಕೆ ಶಿವಕುಮಾರ್ ಹಾಗೂ ಅವರ ಸಂಬಂಧಿಕರ ಮನೆ ಮೆಲೆ ಐಟಿ ದಾಳಿ ನಡೆದಿರುವುದನ್ನು ಖಂಡಿಸಿ ಅವರ ಬೆಂಬಲಿಗರು ಸದಾಶಿವ ನಗರದಲ್ಲಿರುವ ನಿವಾಸದ ಮುಂದೆ ಪ್ರತಿಭಟನೆಗೆ ಮುಂದಾಗಿದ್ದು 100 ಜನರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಡಿಕೆ ಶಿವಕುಮಾರ್ ಬೆಂಬಲಿಗರು ನಿವಾಸದ ಮುಂದೆ ಪ್ರತಿಭಟನೆಗೆ ಮುಂದಾಗಿದ್ದು ಐಟಿ ದಾಳಿ ಕೇಂದ್ರ ಸರ್ಕಾರದ ಪ್ರಚೋದನೆ ಎಂದು ಕೇಂದ್ರದ ವಿರುದ್ಧ ಘೋಷಣೆ ಕೂಗಿದ್ದಾರೆ. ಅವರನ್ನೆಲ್ಲಾ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಇನ್ನು ಕೆಲವು ಕಾರ್ಯಕರ್ತರು ಶೇಷಾದ್ರಿಪುರಂನಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಅದೇ ರೀತಿ ರಾಮನಗರ, ಚಿತ್ರದುರ್ಗದಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಯಲ್ಲಿ ಐಟಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡಾ ಐಟಿ ದಾಳಿಯನ್ನು ಖಂಡಿಸಿದ್ದಾರೆ. ಕೇಂದ್ರ ಸರ್ಕಾರ ತನ್ನ ಲಾಭಕ್ಕಾಗಿ ಐಟಿ ಇಲಾಖೆಯನ್ನು ಬಳಸಿಕೊಳ್ಳುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾದುದು. ಜನ ಇದನ್ನು ಮರೆಯುವುದಿಲ್ಲ. ಬಿಜೆಪಿಗೆ ಪಾಠ ಕಲಿಸುತ್ತಾರೆ ಎಂದು ಸಿಎಂ ಹೇಳಿದ್ದಾರೆ.
