DySP ಗಣಪತಿ ನಿಗೂಢ ಸಾವು ಪ್ರಕರಣದಲ್ಲಿ ಕಾಂಗ್ರೆಸ್'ಗೆ ಮತ್ತೊಮ್ಮೆ ಮುಜುಗರವಾಗಿದೆ. ಸಿಬಿಐ ಅಧಿಕಾರಿಗಳ FIR ನಲ್ಲಿ ಜಾರ್ಜ್ ಹೆಸರು ಕೇಳಿ ಬಂದಿದೆ. ಸಿಬಿಐ ನಡೆಸುತ್ತಿರುವ ತನಿಖೆಯಲ್ಲಿ ಜಾರ್ಜ್ ಹೆಸರು ಉಲ್ಲೇಖವಾಗಿರುವ ಮಾಹಿತಿ ರಾಷ್ಟ್ರೀಯ ಸುದ್ದಿ ವಾಹಿನಿಗಳಲ್ಲಿ ಬಹಿರಂಗವಾಗಿದೆ.
ಬೆಂಗಳೂರು (ಅ.26): DySP ಗಣಪತಿ ನಿಗೂಢ ಸಾವು ಪ್ರಕರಣದಲ್ಲಿ ಕಾಂಗ್ರೆಸ್'ಗೆ ಮತ್ತೊಮ್ಮೆ ಮುಜುಗರವಾಗಿದೆ. ಸಿಬಿಐ ಅಧಿಕಾರಿಗಳ FIR ನಲ್ಲಿ ಜಾರ್ಜ್ ಹೆಸರು ಕೇಳಿ ಬಂದಿದೆ. ಸಿಬಿಐ ನಡೆಸುತ್ತಿರುವ ತನಿಖೆಯಲ್ಲಿ ಜಾರ್ಜ್ ಹೆಸರು ಉಲ್ಲೇಖವಾಗಿರುವ ಮಾಹಿತಿ ರಾಷ್ಟ್ರೀಯ ಸುದ್ದಿ ವಾಹಿನಿಗಳಲ್ಲಿ ಬಹಿರಂಗವಾಗಿದೆ.
ಸಾವಿಗೂ ಮುನ್ನ ‘ನನಗೆ ಏನಾದರೂ ಆದರೆ, ಈ ಮೂವರೇ ಕಾರಣ’ ಎಂದು ಮಾಧ್ಯಮಗಳಿಗೆ ಗಣಪತಿ ಹೇಳಿಕೆ ನೀಡಿದ್ದರು. ಅದರಲ್ಲಿ ಸಚಿವ ಕೆ.ಜೆ. ಜಾರ್ಜ್, ಐಪಿಎಸ್ ಅಧಿಕಾರಿ ಪ್ರಣಬ್ ಮೊಹಂತಿ, ಐಪಿಎಸ್ ಅಧಿಕಾರಿ ಎ.ಎಂ. ಪ್ರಸಾದ್ ಹೆಸರು ಕೇಳಿ ಬಂದಿತ್ತು. ಇದೇ ಪ್ರಕರಣದಲ್ಲಿ ಸಚಿವ ಜಾರ್ಜ್ ರಾಜಿನಾಮೆ ಕೂಡಾ ನೀಡಿದ್ದರು. ನಂತರ ಕ್ಲೀನ್ಚಿಟ್ ಪಡೆದು ಮತ್ತೆ ಸಚಿವರಾಗಿದ್ದರು. ಇದೀಗ ಜಾರ್ಜ್ ಹೆಸರು ಮತ್ತೆ ಕೇಳಿ ಬಂದಿದೆ.
ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕಳೆದ ಸೆ.05ರಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು.
ಗಣಪತಿ ಆತ್ಮಹತ್ಯೆ ಪ್ರಕರಣದ ಸಿಐಡಿ ತನಿಖೆ ನಡೆಯುತ್ತಿರುವಾಗಲೇ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಗಣಪತಿ ಕುಟುಂಬದವರು ಕೋರಿದ್ದರು. ಇದಕ್ಕೆ ಸರ್ಕಾರ ನಿರಾಕರಿಸಿದಾಗ ಗಣಪತಿ ತಂದೆ ಕುಶಾಲಪ್ಪ ಮತ್ತು ತಾಯಿ ಪೂವಮ್ಮ ಅವರು ಹೈಕೋರ್ಟ್ ಏಕ ಸದಸ್ಯ ಪೀಠದ ಮುಂದೆ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್’ನಲ್ಲಿ ಅರ್ಜಿ ವಜಾಗೊಂಡಿತ್ತು.
ನಂತರ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದ ಗಣಪತಿ ಕುಟುಂಬ, ಅಲ್ಲೂ ಅರ್ಜಿ ವಜಾಗೊಂಡಿತ್ತು.
ನಂತರ ಗಣಪತಿ ಪೋಷಕರು ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿಯನ್ನು ಸಲ್ಲಿಸಿದ್ದರು.
