ಮಂಡ್ಯ, (ಆ.31): ಬಿಜೆಪಿ ಸರ್ಕಾರದಲ್ಲಿ ಮೂವರಿಗೆ ಡಿಸಿಎಂ ಹುದ್ದೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಸಚಿವರ ಮಾಧುಸ್ವಾಮಿ ಅವರು ಚಾಮರಾಜನಗರ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಗೆ ಟಾಂಗ್ ಕೊಟ್ಟಿದ್ದಾರೆ.

ಇಂದು (ಶನಿವಾರ) ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಧುಸ್ವಾಮಿ, ನಾವು ಅಮೀತ್ ಶಾ ಅವರ ತಿಳುವಳಿಕೆಯನ್ನು ಪ್ರಶ್ನಿಸುವ ಹಾಗೆ ಇಲ್ಲ ಎಂದು ಹೇಳಿದರು.

3 DCM: ಹೈಕಮಾಂಡ್‌ ನಿರ್ಧಾರವನ್ನು ಪ್ರಶ್ನಿಸಿದ ಬಿಜೆಪಿ ಸಂಸದ

ಮೇಲಿನವರು ಯಾವ ಯಾವ ಕಾರಣಕ್ಕೆ ಮಾಡ್ತಾರೆ ಅಂತಾ ಗೊತ್ತಿಲ್ಲ.ಅವರು ತೀರ್ಮಾನ ತೆಗೆದುಕೊಂಡಿರುವುದು ಪಕ್ಷಕ್ಕೆ ಒಳ್ಳೆಯಾದಾಗುತ್ತೆ ಎಂದುನಾನು ತಿಳಿದುಕೊಂಡಿದ್ದೇನೆ ಎಂದರು.

ಒಬ್ಬೊಬ್ಬರ ಅಭಿಪ್ರಾಯಗಳು ಒಂದೊಂದು ರೀತಿ ಇರುತ್ತವೆ. ಮೇಲೆ ಇರುವವರು ತೀರ್ಮಾನ ತೆಗೆದುಕೊಂಡಾಗ, ನಮಗಿಂತ ಜಾಸ್ತಿ ತಿಳುವಳಿಕೆ ಇದೆ ಎಂದು ಭಾವಿಸುತ್ತೇನೆ ಎಂದು ಪರೋಕ್ಷವಾಗಿ ಚಾಮರಾಜನಗರ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಗೆ ಟಾಂಗ್ ಕೊಟ್ಟರು.

ಮೂರು ಡಿಸಿಎಂ ಹುದ್ದೆಗಳು ಅವಶ್ಯಕತೆ ಇತ್ತಾ? ಎಂದು  ಶ್ರೀನಿವಾಸ್ ಪ್ರಸಾದ್ ಪರೋಕ್ಷವಾಗಿ ತಮ್ಮ ಪಕ್ಷದ ಹೈಕಮಾಂಡ್‌ಗೆ ಪ್ರಶ್ನಿಸಿದ್ದರು