ಮೀಟೂ ಅಭಿಯಾನಕ್ಕೆ ಗೆ ಬಿತ್ತು ಮತ್ತೊಂದು ವಿಕೆಟ್?! ಸಂಪುಟಕ್ಕೆ ಕೇಂದ್ರ ಸಚಿವ ಎಂ.ಜೆ. ಅಕ್ಬರ್ ರಾಜೀನಾಮೆ?! ಪ್ರಧಾನಿ ಮೋದಿಗೆ ಇ-ಮೇಲ್ ಮೂಲಕ ರಾಜೀನಾಮೆ ರವಾನೆ?! ಅಕ್ಬರ್ ವಿರುದ್ಧ ಮಹಿಳಾ ಪತ್ರಕರ್ತೆಯ ಲೈಂಗಿಕ ಕಿರುಕುಳ ಆರೋಪ 

ನವದೆಹಲಿ(ಅ.14): ಮಹತ್ವದ ಬೆಳವಣಿಗೆಯೊಂದರಲ್ಲಿ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಕೇಂದ್ರ ಸಚಿವ ಎಂ.ಜೆ. ಅಕ್ಬರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ವಿದೇಶ ಪ್ರವಾಸ ಕೈಗೊಂಡಿದ್ದ ಅಕ್ಬರ್ ಇಂದು ಬೆಳಿಗ್ಗೆಯಷ್ಟೇ ರಾಜಧಾನಿ ದೆಹಲಿಗೆ ಆಗಮಿಸಿದ್ದರು. ಅದಾದ ಕೆಲವೇ ಕ್ಷಣಗಳಲ್ಲಿ ಅಕ್ಬರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಅಕ್ಬರ್ ತಮ್ಮ ರಜೀನಾಮೆ ಪತ್ರವನ್ನು ಇ-ಮೇಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ ಎನ್ನಲಾಗಿದ್ದು, ಪ್ರಧಾನಿ ಕಚೇರಿ ಮೂಲಗಳು ಈ ವಿಷಯವನ್ನು ಇನ್ನಷ್ಟೇ ದೃಢೀಕರಿಸಬೇಕಿದೆ.

ಇನ್ನು ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಎಂ.ಜೆ. ಅಕ್ಬರ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪದ ಕುರಿತು ಚರ್ಚೆ ನಡೆಸಬೇಕಾದ ಅಗತ್ಯವಿದೆ ಎಂದು ತಿಳಿಸಿದ್ದರು.

Scroll to load tweet…

ಇದಕ್ಕೂ ಮೊದಲು ಇಂದು ಬೆಳಗ್ಗೆ ವಿಮಾನ ನಿಲ್ದಾಣದಲ್ಲಿ ಮಾತನಾಡಿದ್ದ ಅಕ್ಬರ್, ತಮ್ಮ ವಿರುದ್ಧ ಕೇಳಿ ಬಂದಿರುವ ಲೈಂಗಿಕ ಕಿರುಕುಳ ಆರೋಪಗಳ ಕುರಿತು ಶೀಘ್ರದಲ್ಲಿಯೇ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದ್ದರು.

ಕೆಲ ದಿನಗಳ ಹಿಂದಷ್ಟೇ ಮಹಿಳಾ ಪತ್ರಕರ್ತೆಯೊಬ್ಬರು, ದಿ ಟೆಲಿಗ್ರಾಫ್ ಪತ್ರಿಕೆಯ ಸಂಪಾದಕರಾಗಿದ್ದ ಎಂ.ಜೆ.ಅಕ್ಬರ್ ತಮಗೆ ವೃತ್ತಿ ಸಂದರ್ಭದಲ್ಲಿ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಆರೋಪ ಮಾಡಿದ್ದರು. 

ಈ ಆರೋಪ ಸಂಬಂಧ ವಿರೋಧ ಪಕ್ಷಗಳು ಅಕ್ಬರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದವು.