ಮೋದಿಯನ್ನು ಟೀಕೆ ಮಾಡುವ ಗಟ್ಸ್ ಇರುವುದು ಸಿದ್ದರಾಮಯ್ಯ ಅವರಿಗೆ ಮಾತ್ರ. ಪ್ರಧಾನಿ ರಾಷ್ಟ್ರೀಯ, ಅಂತರಾಷ್ಟ್ರೀಯ ವಿಚಾರಗಳನ್ನು ಬಿಟ್ಟು ಪಂಚಾಯತ್ ಚುನಾವಣೆಗೆ ಬಂದು ಪ್ರಚಾರ ಮಾಡುತ್ತಿದ್ದಾರೆ. ಕೋಮು ಶಕ್ತಿಗಳು, ಜಾತಿ ಶಕ್ತಿಗಳನ್ನು ತಡೆಯಲು ಸಿದ್ದರಾಮಯ್ಯನವರಿಗೆ ಅವಕಾಶಕೊಡಿ ಎಂದು ಮಹಾದೇವಪ್ಪ ಮನವಿ ಮಾಡಿಕೊಂಡಿದ್ದಾರೆ.  

ಬೆಂಗಳೂರು(ಮಾ.11): ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರದಿದ್ದರೆ ರಾಜ್ಯದಲ್ಲಿ ಕೋಮುವಾದಿಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಲೋಕೋಪಯೋಗಿ ಸಚಿವ ಮಹದೇವಪ್ಪ ಹೇಳಿದ್ದಾರೆ.

ಕೆಲವರು ಸಂವಿಧಾನ ತಿದ್ದುಪಡಿ ಮಾಡುತ್ತೇವೆಂದು ಬಹಿರಂಗವಾಗಿ ಹೇಳುತ್ತಾರೆ, ಬುದ್ದಿಜೀವಿಗಳ ರಕ್ತ ಟೆಸ್ಟ್ ಮಾಡಬೇಕು ಎಂದು ಹೇಳುತ್ತಾರೆ. ಸಂವಿಧಾನದ ಮೇಲೆ ಗದಾಪ್ರಹಾರ ಮಾಡಲು ಮುಂದಾಗಿದ್ದಾರೆ. ಈಗ ನಾವು ಎಚ್ಚೆತ್ತುಕೊಳ್ಳುವ ಸಮಯ ಬಂದಿದೆ ಎಂದು ಹೇಳಿದ್ದಾರೆ.