ಸಚಿವ ಎಂ.ಬಿ.ಪಾಟೀಲ್ ಹಾಗೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಡುವೆ ವಾಕ್ಸಮರ ಮುಂದುವರೆದಿದೆ. ‘ಎಂ.ಬಿ ಪಾಟೀಲ್ಗೆ ತಲೆ ತಿರುಗಿದೆ’ ಎಂಬ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಚಿವ ಎಂ.ಬಿ. ಪಾಟೀಲ್ ತಿರುಗೇಟು ನೀಡಿದ್ದಾರೆ.
ಬೆಂಗಳೂರು: ಸಚಿವ ಎಂ.ಬಿ.ಪಾಟೀಲ್ ಹಾಗೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಡುವೆ ವಾಕ್ಸಮರ ಮುಂದುವರೆದಿದೆ.
‘ಎಂ.ಬಿ ಪಾಟೀಲ್ಗೆ ತಲೆ ತಿರುಗಿದೆ’ ಎಂಬ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಚಿವ ಎಂ.ಬಿ. ಪಾಟೀಲ್ ತಿರುಗೇಟು ನೀಡಿದ್ದಾರೆ.
ಶಾಮನೂರು ಅವರು ವಯೋಸಹಜ ಗುಣಗಳಿಂದಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ, ಎಂದು ಪಾಟೀಲ್ ಹೇಳಿದ್ದಾರೆ.
ಸಾರ್ವಜನಿಕವಾಗಿ ಏಕವಚನದಲ್ಲಿ ಹೇಳಿಕೆ ನೀಡುತ್ತಿರುವುದು ಅವರಿಗೆ ಶೋಭೆ ತರಲ್ಲ; ನನಗೆ ಜೀವ ಬೆದರಿಕೆ ಇದೆ, ಭದ್ರತೆ ಬೇಕು ಎಂದು ಎಲ್ಲಿಯೂ ಹೇಳಿಲ್ಲ, ಕೆಲ ಸ್ವಾಮೀಜಿಗಳು ನಮ್ಮನ್ನು ಸರ್ವನಾಶ ಮಾಡುವುದಾಗಿ ಶಪಥ ಮಾಡಿದ್ದಾರೆ, ಸರ್ವನಾಶ ಎಂದರೆ ಏನು ಎನ್ನುವುದನ್ನು ಶಾಮನೂರು ಅವರು ತಿಳಿಸಬೇಕು ಎಂದು ಎಂ.ಬಿ. ಪಾಟೀಲ್ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.
