ಯಾರೂ ಇಂಥದ್ದೇ ಜಾತಿಯಲ್ಲಿ ಹುಟ್ಟಬೇಕೆಂದು ಅರ್ಜಿ ಹಾಕಿಕೊಂಡು ಹುಟ್ಟುವುದಿಲ್ಲ

ಕಾರವಾರ(ಡಿ.29): ನಾನು ಹಿಂದು, ಬ್ರಾಹ್ಮಣರ ಮನೆಯಲ್ಲಿ ಹುಟ್ಟಿದ್ದೇನೆ. ನಾನು ಬ್ರಾಹ್ಮಣ ಎಂದು ಹೇಳಿಕೊಳ್ಳಲು ಹಿಂಜರಿಕೆ ಇಲ್ಲ. ಯಾರೂ ಅರ್ಜಿ ಹಾಕಿಕೊಂಡು ಹುಟ್ಟುವುದಿಲ್ಲ ಎಂದು ಬೃಹತ್ ಕೈಗಾರಿಕೆ ಸಚಿವ ಆರ್.ವಿ. ದೇಶ ಪಾಂಡೆ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆಗೆ ಟಾಂಗ್ ನೀಡಿದ್ದಾರೆ.

ಮಾಧ್ಯಮದವರ ಜೊತೆ ಮಾತನಾಡಿದ ಅವರು, ಯಾರೂ ಇಂಥದ್ದೇ ಜಾತಿಯಲ್ಲಿ ಹುಟ್ಟಬೇಕೆಂದು ಅರ್ಜಿ ಹಾಕಿಕೊಂಡು ಹುಟ್ಟುವುದಿಲ್ಲ ಎಂದು ಹೇಳಿದರು. ನಾನು ಬ್ರಾಹ್ಮಣ ಎಂದು ಹೇಳಿಕೊಳ್ಳುತ್ತೇನೆ. ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಹೆಸರಿನಲ್ಲಿ ರಾಮ ಇದೆ ಎಂದಿದ್ದಾರೆ.