ಬೆಂಗಳೂರು, (ಸೆ. 02): ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶಿಕ್ಷಕರ ಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿದ್ದಾರೆ.

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮತ್ತೆ ಶುರು

ಈ ಹಿಂದೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಇಷ್ಟವಿಲ್ಲದಿದ್ದರೂ ವರ್ಗಾವಣೆಯಿಂದಾಗಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗಬೇಕಾಗಿತ್ತು. 

ಆದ್ರೆ  ಇದಕ್ಕೆ ಸುರೇಶ್ ಕುಮಾರ್ ಬ್ರೇಕ್ ಹಾಕಿದ್ದಾರೆ. ಈ ಮೂಲಕ  ಶಿಕ್ಷಕರು ನಿರಾಳರಾಗಿದ್ದಾರೆ. ಇನ್ನೊಂದು ಪ್ರಮುಖ ಅಂಶ ಅಂದ್ರೆ ಶಿಕ್ಷಕರು ಪರಸ್ಪರ ವರ್ಗಾವಣೆ ಮಾಡಿಕೊಳ್ಳವ ಅವಕಾಶವಿತ್ತು. ಇದರ ಬಗ್ಗೆ ಮಂಗಳವಾರ ನಿರ್ಧಾರ ಕೈಗೊಳ್ಳುವುದಾಗಿ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಒಟ್ಟಿನಲ್ಲಿ  ಸುರೇಶ್ ಕುಮಾರ್ ಅವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಗೆ ಮೇಜರ್ ಸರ್ಜರಿ ಮಾಡಲು ಮುಂದಾಗಿದ್ದು, ಏನೆಲ್ಲ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.