ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಅನ್ನಭಾಗ್ಯ ಯೋಜನೆಯನ್ನು ರದ್ದು ಮಾಡುವುದಾಗಿ ಜೆಡಿಎಸ್ ವರಿಷ್ಠ ದೇವೇಗೌಡರು ಹೇಳಿದ್ದಾರೆ.
ಕೊರಟಗೆರೆ(ಡಿ.18): ಜೆಡಿಎಸ್ ಅಧಿಕಾರಕ್ಕೇರಿದರೆ ಅನ್ನಭಾಗ್ಯ ಯೋಜನೆ ರದ್ದು ಮಾಡುವು ದಾಗಿ ಹೇಳಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಬಡವರ ತಲೆ ಮೇಲೆ ಕಲ್ಲು ಚಪ್ಪಡಿ ಎಳೆಯಲು ಹೊರಟಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಸಚಿವೆ ಉಮಾಶ್ರೀ ಹೇಳಿದ್ದಾರೆ.
ಸಮಾವೇಶವೊಂದರಲ್ಲಿ ಮಾತನಾಡಿ, ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಅನ್ನಭಾಗ್ಯ ಯೋಜನೆಯನ್ನು ರದ್ದು ಮಾಡುವುದಾಗಿ ಜೆಡಿಎಸ್ ವರಿಷ್ಠ ದೇವೇಗೌಡರು ಹೇಳಿದ್ದಾರೆ. ಈ ಮೂಲಕ ಬಡವರ ತಲೆಮೇಲೆ ಕಲ್ಲು ಚಪ್ಪಡಿ ಎಳೆಯಲು ಹೊರಟಿದ್ದಾರೆ ಎಂದು ದೂರಿದರು.
