ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಚಿವರು ಈ ರೀತಿಯ ಪದ ಬಳಕೆಗೆ ಹಲವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಂಗಳೂರು(ಸೆ.23):ಲೇಖಕ ಹಾಗೂ ಚಿಂತಕ ಚಕ್ರವರ್ತಿ ಸೂಲಿಬೆಲೆಯವರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಅವರು ತಮ್ಮ ಭಾಷಣದಲ್ಲಿ ಕೀಳುಮಟ್ಟದಲ್ಲಿ ವ್ಯಂಗ್ಯವಾಡಿದ್ದು,ಈ ದೃಶ್ಯ ಸಾಮಾಜಿಕ ಜಾಲತಣಗಳಲ್ಲಿ ವೈರಲ್ ಆಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಿಲ್ಲೆಯ ಅಸೈಗೋಳದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ತುಳು ಭಾಷೆಯಲ್ಲಿ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಚಿವರು, ಸೂಲಿಬೆಲೆನಾ ಸೂಲೆಬೆಲೆನಾ ಎಂದು ಮತ್ತೆ ಮತ್ತೆ ಸಭಿಕರನ್ನು ಕೇಳಿ ವ್ಯಂಗ್ಯವಾಡಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಚಿವರು ಈ ರೀತಿಯ ಪದ ಬಳಕೆಗೆ ಹಲವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.