ಆದರೆ ಸಚಿವ ಬೇಗ್ ಆರೋಪಗಳನ್ನು ನಿರಾಕರಿಸಿದ್ದು, ತಾವು ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲವೆಂದು ಹೇಳಿದ್ದಾರೆ. ತಾವು ಅಂತಹ ರೋಪಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲವೆಂದು ಅವರು ಹೇಳಿದ್ದಾರೆ.
ಬೆಂಗಳೂರು (ಮಾ.13): ನಗರಾಭಿವೃದ್ಧಿ ಹಾಗೂ ಹಜ್ ಸಚಿವ ರೋಶನ್ ಬೇಗ್ ಖಾಸಗಿ ಕಾರ್ಯಕ್ರಮಕ್ಕೆ ಸರ್ಕಾರಿ ಲೆಟರ್’ಹೆಡ್ ಬಳಸಿದ್ದಾರೆ.
ಮುಂಬರುವ ಶನಿವಾರ ನಡೆಯಲಿರುವ ಪುತ್ರನ ವಿವಾಹ ಸಮಾರಂಭಕ್ಕೆ ಗಣ್ಯ ಹಾಗೂ ಅತೀ ಗಣ್ಯ ವ್ಯಕ್ತಿಗಳಿಗೆ ಕಳುಹಿಸಿರುವ ಆಮಂತ್ರಣ ಪತ್ರದೊಂದಿಗೆ ಸರ್ಕಾರಿ ಲೆಟರ್’ಹೆಡ್ಡನ್ನು ಬಳಸಿರುವ ಬೇಗ್ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕೇಳಿಕೊಂಡಿದ್ದಾರೆ.

ಮಾರ್ಚ್ 18ರಂದು ಕಾನ್ಪುರದಲ್ಲಿ ವಿವಾಹ ನಡೆಯಲಿದ್ದು 26 ಮಾರ್ಚ್’ಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾರಂಭ ನಡೆಯಲಿದೆ.
ಸರ್ಕಾರಿ ಲೆಟರ್’ಹೆಡ್ ಕಚೇರಿ ಉದ್ದೇಶಕ್ಕೆ ಬಳಕೆಯಾಗಬೇಕೇ ಹೊರತು ವೈಯುಕ್ತಿಕ ಉದ್ದೇಶಕ್ಕೆ ಬಳಕೆಯಾಗಬಾರದು. ಸಚಿವರ ಕ್ರಮ ಖಂಡನೀಯವೆಂದು ರಾಜಕೀಯ ಹೋರಾಟಗಾರ ರವಿಕೃಷ್ಣ ರೆಡ್ಡಿ ಹೇಳಿದ್ದಾರೆ.
ಆದರೆ ಸಚಿವ ಬೇಗ್ ಆರೋಪಗಳನ್ನು ನಿರಾಕರಿಸಿದ್ದು, ತಾವು ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲವೆಂದು ಹೇಳಿದ್ದಾರೆ. ತಾನು ಅಂತಹ ಆರೋಪಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲವೆಂದು ಅವರು ಹೇಳಿದ್ದಾರೆ.
