ಮಹಾರಾಷ್ಟ್ರದಲ್ಲಿ ಎಂ.ಎಸ್.ಆರ್.ಟಿ.ಸಿ(ಮಹಾರಾಷ್ಟ್ರ ಸಾರಿಗೆ ಸಂಸ್ಥೆ) ನೌಕರರು ಪ್ರತಿಭಟನೆ ನಡೆಸುತ್ತಿರುವ ವೇಳೆಯಲ್ಲೇ ಕರ್ನಾಟಕ ಸಾರಿಗೆ ಬಸ್‌ ಹೋಗಿದ್ದರಿಂದ ಆಕ್ರೋಶಗೊಂಡ ನೌಕರರು ಬಸ್‌ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.
ಬೆಳಗಾವಿ(ಅ. 17): ಮಹಾರಾಷ್ಟ್ರದಲ್ಲಿ ಕರ್ನಾಟಕ ಸಾರಿಗೆ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿರುವುದು ವರದಿಯಾಗಿದೆ. ಮಹಾರಾಷ್ಟ್ರದ ಕೊಲ್ಲಾಪುರ ಬಳಿಯ ಕುಗನೊಳ್ಳಿ ಬಳಿ ಬಳ್ಳಾರಿ-ಪೂನಾ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟದಿಂದಾಗಿ ಬಸ್'ನ ಗಾಜುಗಳು ಪುಡಿ ಪುಡಿಯಾಗಿದೆ.
ಮಹಾರಾಷ್ಟ್ರದಲ್ಲಿ ಎಂ.ಎಸ್.ಆರ್.ಟಿ.ಸಿ(ಮಹಾರಾಷ್ಟ್ರ ಸಾರಿಗೆ ಸಂಸ್ಥೆ) ನೌಕರರು ಪ್ರತಿಭಟನೆ ನಡೆಸುತ್ತಿರುವ ವೇಳೆಯಲ್ಲೇ ಕರ್ನಾಟಕ ಸಾರಿಗೆ ಬಸ್ ಹೋಗಿದ್ದರಿಂದ ಆಕ್ರೋಶಗೊಂಡ ನೌಕರರು ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಘಟನೆ ಬಳಿಕ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವೆ ಸಾರಿಗೆ ಸಂಚಾರ ಬಂದ್ ಆಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಿಪ್ಪಾಣಿಯಲ್ಲಿ ಕರ್ನಾಟಕದ ಎಲ್ಲಾ ಬಸ್ ಸಂಚಾರ ಬಂದ್ ಆಗಿದೆ.
