ಕಾಣೆಯಾಗಿದ್ದ ನಗರದ ವಿದ್ಯಾರ್ಥಿನಿ ಶವವಾಗಿ ಪತ್ತೆ

ಬೆಂಗಳೂರು(ಫೆ.03): ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದೆ.

ಎಲೆಕ್ಟ್ರಾನಿಕ್ ಸಿಟಿ ಸಮೀಪದ ಸುಭಾಷ್ ನಗರ ರಾಣಿ ಖಾಸಗಿ ಶಾಲೆಯಲ್ಲಿ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದಳು. ಈ ಬಗ್ಗೆ ವಿದ್ಯಾರ್ಥಿನಿ ಪೋಷಕರು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇಂದು ಬೆಳಗ್ಗೆ ರಾಣಿ ಶವ ಹೊಸೂರು ಮುಖ್ಯರಸ್ತೆಯ ಹೊಸ ರೋಡ್ ಜಂಕ್ಷನ್ ಬಳಿಯ ಬಸವಾಪುರ ಕೆರೆಯಲ್ಲಿ ಪತ್ತೆಯಾಗಿದೆ. ನಂತರ ಸ್ಥಳಕ್ಕಾಗಮಿಸಿದ ಪೊಲೀಸರು ಮೃತ ದೇಹವನ್ನು ಹೊರತೆಗೆದು ಶವ ಪರೀಕ್ಷೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಾಗಿದೆ.