ಥರ್ಡ್ ಪಾರ್ಟಿ ಪ್ರೀಮಿಯಮ್ ದರ ಏರಿಕೆಯನ್ನು ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಲಾರಿ ಮಾಲೀಕರು ನಡೆಸುತ್ತಿರುವ ಪ್ರತಿಭಟನೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಯಶವಂತಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ಪ್ರತಿಭಟನೆ ಕಾವು ಸ್ವಲ್ಪ ಹೆಚ್ಚಿದ್ದರೆ, ಇನ್ನು ಕೆ.ಆರ್ ಮಾರ್ಕೆಟ್ ನಲ್ಲಿ ಹೇಳಿಕೊಳ್ಳುವಂತಹ ಯಾವುದೇ ಪರಿಣಾಮ ಬೀರಿಲ್ಲ.

ಬೆಂಗಳೂರು (ಏ.02): ಥರ್ಡ್ ಪಾರ್ಟಿ ಪ್ರೀಮಿಯಮ್ ದರ ಏರಿಕೆಯನ್ನು ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಲಾರಿ ಮಾಲೀಕರು ನಡೆಸುತ್ತಿರುವ ಪ್ರತಿಭಟನೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಯಶವಂತಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ಪ್ರತಿಭಟನೆ ಕಾವು ಸ್ವಲ್ಪ ಹೆಚ್ಚಿದ್ದರೆ, ಇನ್ನು ಕೆ.ಆರ್ ಮಾರ್ಕೆಟ್ ನಲ್ಲಿ ಹೇಳಿಕೊಳ್ಳುವಂತಹ ಯಾವುದೇ ಪರಿಣಾಮ ಬೀರಿಲ್ಲ.

ಕೇಂದ್ರ ಸರ್ಕಾರ ನಮ್ಮ ಬೇಡಿಕೆ ಈಡೇರಿಸುವ ವರೆಗೂ ಪ್ರತಿಭಟನೆ ಮುಂದುವರಿಸುತ್ತೇವೆಂದು ಲಾರಿ ಮಾಲೀಕ ಸಂಘಟನೆಗಳು ಒಂದೆಡೆ ಹೇಳುತ್ತಿವೆ. ಆದ್ರೆ, ಇನ್ನೊಂದೆಡೆ ಪ್ರತಿಭಟನೆ ಲೆಕ್ಕಿಸದೆ ಲಾರಿಗಳ ಸಂಚಾರ ನಡೆಯುತ್ತಿದೆ. ಕೆಆರ್ ಮಾರ್ಕೇಟ್ ನಲ್ಲಿ ವ್ಯಾಪಾರ ವಹಿವಾಟು ಎಂದಿನಂತೆ ನಡೆಯುತ್ತಿದೆ. ಅಗತ್ಯ ವಸ್ತುಗಳಾದ ಹಣ್ಣು, ತರಕಾರಿ,ಹೂವು ,ಹಾಲು ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಕಂಡುಬಂದಿಲ್ಲ.