ತೀವ್ರ ಹೊಟ್ಟೆ ನೋವಿನಿಂದ ಬಳುತ್ತಿದ್ದ ಮಹಿಳೆಗೆ ಚಿಕಿತ್ಸೆ ನೀಡಲು ಆಸ್ಪತ್ರೆಯಲ್ಲಿ ವೈದ್ಯರಿರಲಿಲ್ಲ. ಹೀಗಾಗಿ ವಿಷಯ ತಿಳಿದ ಮಿಜೋರಾಂ ಶಾಸಕ ಕೆ.ಬೈಚುವಾ ಆಸ್ಪತ್ರೆಗೆ ತೆರಳಿ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಿ ಮಹಿಳೆಯ ಪ್ರಾಣ ಉಳಿಸಿದ್ದಾರೆ.

ಐಜ್ವಾಲ್ (ಫೆ. 24): ಮಿಜೋರಾಂ ಶಾಸಕನೋರ್ವ ಮಾನವೀಯತೆ ಮೆರೆದು ಮಹಿಳೆಯೊಬ್ಬರ ಜೀವ ಉಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಮಿಜೋರಾಂ ಶಾಸಕ ಕೆ.ಬೈಚುವಾ ಕಾರ್ಯಕ್ರಮ ನಿಮಿತ್ತ ಗ್ರಾಮವೊಂದಕ್ಕೆ ತೆರಳಿದ್ದರು. ಆದರೆ ಗ್ರಾಮದಲ್ಲಿ ಮಹಿಳೆಯೋರ್ವಳು ತೀವ್ರ ಹೊಟ್ಟೆ ನೋವಿನಿಂದ ಬಳಲಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು.

ತೀವ್ರ ಹೊಟ್ಟೆ ನೋವಿನಿಂದ ಬಳುತ್ತಿದ್ದ ಮಹಿಳೆಗೆ ಚಿಕಿತ್ಸೆ ನೀಡಲು ಆಸ್ಪತ್ರೆಯಲ್ಲಿ ವೈದ್ಯರಿರಲಿಲ್ಲ. ಹೀಗಾಗಿ ವಿಷಯ ತಿಳಿದ ಮಿಜೋರಾಂ ಶಾಸಕ ಕೆ.ಬೈಚುವಾ ಆಸ್ಪತ್ರೆಗೆ ತೆರಳಿ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಿ ಮಹಿಳೆಯ ಪ್ರಾಣ ಉಳಿಸಿದ್ದಾರೆ.

ನಂತರ ಮಹಿಳೆಯನ್ನು ಭೇಟಿ ಮಾಡಿದ ಕೆ.ಬೈಚುವಾರವರು ಸಂತೋಷದಿಂದ ಮಹಿಳೆಯ ಆರೋಗ್ಯ ವಿಚಾರಿಸಿದರು. ಈ ಹಿಂದೆ ಕೆ.ಬೈಚುವಾರವರು ಸೈಹಾ ಜಿಲ್ಲಾ ಸಿವಿಲ್ ಆಸ್ಪತ್ರೆಯಲ್ಲಿ ಸರ್ಜನ್ ಆಗಿ ಕಾರ್ಯನಿರ್ವಹಿಸಿದ್ದರು.