ಇನ್ನೇನು ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು ಇದೇ ವೇಳೆ ಬಿಜೆಪಿ ವಿರೋಧಿ ಒಕ್ಕೂಟಕ್ಕೆ ಇನ್ನೋರ್ವ ನಾಯಕನ ಬೆಂಬಲ ದೊರಕಿದೆ. 

ಚೆನ್ನೈ: ಗುರುವಾರ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಭೇಟಿ ಮಾಡಿದ್ದ ತೆಲುಗುದೇಶಂ ನಾಯಕ ಚಂದ್ರಬಾಬು ನಾಯ್ಡು ಅವರು, ಶುಕ್ರವಾರ ಡಿಎಂಕೆ ನೇತಾರ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿ ಮಾಡಿ 2019 ರಲ್ಲಿ ಬಿಜೆಪಿಯೇತರ ಮಹಾಮೈತ್ರಿಕೂಟ ರಚಿಸುವಬಗ್ಗೆ ಮಾತುಕತೆ ನಡೆಸಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಸಂದರ್ಭದಲ್ಲಿ ಸ್ಟಾಲಿನ್ ಅವರು ನಾಯ್ಡು ಅವರ ಯತ್ನಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು ಹಾಗೂ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಿಜೆಪಿಯನ್ನು ಸೋಲಿಸಲು ಇತರ ಎಲ್ಲ ಪಕ್ಷಗಳು ಮುಂದಾಗಬೇಕು ಎಂದು ಕರೆ ನೀಡಿದರು.